ರಿಪ್ಪನ್‌ಪೇಟೆ: ಇಂದು ಮತ್ತೊಂದು ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಸೋಂಕು ! ಹೆಚ್ಚಿದ ಮತ್ತಷ್ಟು ಆತಂಕ

0
572

ರಿಪ್ಪನ್‌ಪೇಟೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿನ ದ್ವಿತೀಯ ವರ್ಷದ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು ತಕ್ಷಣ ವಿದ್ಯಾರ್ಥಿಯನ್ನು ಮನೆಗೆ ಕಳುಹಿಸುವ ಮೂಲಕ ಶಾಲಾ ಕಾಲೇಜ್ ಕೊಠಡಿಯನನ್ನು ಸ್ಯಾನಿಟೈಸರ್ ಮಾಡುವ ಮೂಲಕ ಮುಂಜಾಗ್ರತ ಕ್ರಮ ವಹಿಸಲಾಗಿದೆ ಎಂದು ಪ್ರಾಚಾರ್ಯ ಎಸ್.ಕೆ.ಮಂಜುನಾಥ್ ತಿಳಿಸಿದರು.

ಕೋವಿಡ್ ಪರೀಕ್ಷೆಯ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ವಿದ್ಯಾರ್ಥಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಭೇಟಿ ನೀಡಿ ವಿದ್ಯಾರ್ಥಿಗಳ ಸ್ವಾಬ್ ಪರೀಕ್ಷೆ ನಡೆಸಿದರು.

ಪದವಿ ಕಾಲೇಜಿನಲ್ಲೂ ಸೋಂಕು:

ಇಲ್ಲಿನ ಸರ್ಕಾರಿ ಪದವಿ ಕಾಲೇಜಿನಲ್ಲಿನ ದ್ವಿತೀಯ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು ತಕ್ಷಣ ವಿದ್ಯಾರ್ಥಿಯನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ವಿದ್ಯಾರ್ಥಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾನೆ. ಕೋವಿಡ್ ಪರೀಕ್ಷೆಯಲ್ಲಿ ಸೋಂಕು ಇರುವುದು ಕಂಡುಬಂದ ಹಿನ್ನಲೆಯಲ್ಲಿ ಕಾಲೇಜಿನ ಆಡಳಿತ ವರ್ಗ ದ್ವಿತೀಯ ಬಿ.ಕಾಂ ತರಗತಿಯಲ್ಲಿ ಇದ್ದ ಎಲ್ಲಾ 69 ವಿದ್ಯಾರ್ಥಿಗಳ ಮತ್ತು ನಾಲ್ವರು ಉಪನ್ಯಾಸಕರನ್ನು ಸ್ವಾಬ್ ಪರೀಕ್ಷೆಗೆ ಒಳಪಡಿಸಿ ಸೋಮವಾರದವರೆಗೆ ರಜೆ ಘೋಷಿಸಲಾಯಿತು. ಹಾಗೆ ಸೋಮವಾರದ ನಂತರ ಕಾಲೇಜಿನ ವಿದ್ಯಾರ್ಥಿಗಳು ಡಬಲ್ ಡೋಸ್ ಸರ್ಟಿಫಿಕೇಟ್ ತರುವಂತೆ ಕಾಲೇಜ್ ಪ್ರಾಚಾರ್ಯ ಟಿ.ಚಂದ್ರಶೇಖರ್ ಆದೇಶಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here