ರಿಪ್ಪನ್‌ಪೇಟೆ ಗ್ರಾಪಂ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಆಸೀಫ಼್ ಭಾಷಾಸಾಬ್ ಆಯ್ಕೆ

0
493

ಹೊಸನಗರ: ರಿಪ್ಪನ್‌ಪೇಟೆ ಗ್ರಾಪಂ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಆಸೀಫ಼್ ಭಾಷಾಸಾಬ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಹೊಸನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪದಗ್ರಹಣ ಹಾಗೂ ಜವಾಬ್ದಾರಿ ಹಂಚಿಕೆ ಸಭೆಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಜಿ ನಾಗರಾಜ್ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದು, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಉಪಸ್ಥಿತಿಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರವರು ಆದೇಶದ ಪ್ರತಿಯನ್ನು ಆಸೀಫ಼್ ಭಾಷಾಸಾಬ್ ಅವರಿಗೆ ಹಸ್ತಾಂತರಿಸಿದರು.

ಆಸೀಫ಼್ ಭಾಷಾಸಾಬ್ ರವರು ಎರಡು ಅವಧಿಗೆ ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಉತ್ಸಾಹದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಯುವ ಮುಖಂಡರಾಗಿ ಉತ್ತಮ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ.

ಪಕ್ಷ ಹೇಳಿದ ಎಲ್ಲಾ ಸಂಘಟನಾತ್ಮಕ ಕೆಲಸಗಳನ್ನು ಹಾಗೂ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನ ಸಾಮಾನ್ಯ‌ರಿಗೆ ತಲುಪಿಸುವಲ್ಲಿಯೂ ಆಸೀಫ಼್ ಭಾಷಾಸಾಬ್ ಅವರು ಮುಂಚೂಣಿಯಲ್ಲಿದ್ದಾರೆ.

ಈ ಸಂಧರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಶ್ವೇತಾ ಬಂಡಿ, ಬಿ‌‌.ಪಿ ರಾಮಚಂದ್ರ, ಸಾಗರ ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಟಿ, ಎರಗಿ ಉಮೇಶ್, ಚಂದ್ರಮೌಳಿಗೌಡ, ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರಾದ ಮಧುಸೂದನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here