ರಿಪ್ಪನ್ಪೇಟೆ: ಕೇಂದ್ರದ ಬಿಜೆಪಿ ನೇತೃತ್ವದ ಮೋದಿಜೀಯವರ ಮಹಾತ್ವಾಕಾಂಕ್ಷಿ ಯೋಜನೆಯಾದ ಉದ್ಯೋಗ ಖಾತ್ರಿ ಯೋಜನೆಗೆ ಇನ್ನೂ ಹೆಚ್ಚಿನ ಪ್ರಗತಿ ನೀಡುವ ಉದ್ದೇಶದೊಂದಿಗೆ ಜಲಸಂರಕ್ಷಣೆಗೆ ಸರ್ಕಾರ ಹೆಚ್ಚು ಅದ್ಯತೆ ನೀಡುವ ಜಲಶಕ್ತಿ ಅಭಿಯಾನ ಕಾರ್ಯಕ್ರಮಕ್ಕೆ ಇಂದು ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲಾ ಷರೀಫ್ ಚಾಲನೆ ನೀಡಿದರು.
ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಇಂದು ಹುಬ್ಬಳ್ಳಿಯಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 100 ದಿನದವರೆಗೆ ಜಲಶಕ್ತಿ ಅಭಿಯಾನ ಆಯೋಜಿಸಲಾಗಿ ಈ ಯೋಜನೆಗೆ ಚಾಲನೆ ನೀಡುತ್ತಿದ್ದು ಅದರಂತೆ ಸಾಗರ-ಹೊಸನಗರ ಕ್ಷೇತ್ರದ ವ್ಯಾಪ್ತಿಯ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗೌರಿ ಹಳ್ಳಕ್ಕೆ ಕಾಲುವೆ ನಿರ್ಮಾಣ ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಈ ಯೋಜನೆಯಿಂದ ರೈತಾಪಿ ವರ್ಗ ತಮ್ಮ ತೋಟಗಳಿಗೆ ಬೇಸಿಗೆಯಲ್ಲಿ ಕೆರೆ ನೀರು ಹರಿಸಲು ಮತ್ತು ಅಂತರ್ಜಲ ಹೆಚ್ಚಿಸಿಕೊಳ್ಳಲು ಸಹಕಾರಿಯಾಗುವುದು ಮತ್ತು ಮಳೆಗಾಲದಲ್ಲಿ ಕಾಲುವೆಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಅನುಕೂಲವಾಗುವುದು. ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವುದರೊಂದಿಗೆ ನಿರುದ್ಯೋಗ ಸಮಸ್ಯೆ ದೂರವಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುವುದೆಂದರು.
ಇದೇ ಸಂದರ್ಭದಲ್ಲಿ ಕಸ ವಿಲೆವಾರಿಗಾಗಿ ಮನೆ-ಮನೆಗೆ ಬಕೇಟ್ ವಿತರಿಸಲಾಯಿತು.
ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರು ಪುಟ್ಟಮ್ಮ ಭಾಸ್ಕರ್, ಹಾಗೂ ಸದಸ್ಯರಾದ ಮಹಮದ್ ಷರೀಫ್ ಗಾಳಿಬೈಲು, ಗೌರಮ್ಮ ಮಸರೂರು, ಪರಮೇಶ್ ಹೊನ್ನಕೊಪ್ಪ, ಕೃಷ್ಣೋಜಿರಾವ್, ಲಕ್ಷ್ಮಮ್ಮ, ಹೂವಮ್ಮ, ರಮ್ಯ, ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ರವಿಕುಮಾರ್ ಇನ್ನಿತರ ಗ್ರಾಮಸ್ಥರು ಹಾಜರಿದ್ದರು.