ರಿಪ್ಪನ್ಪೇಟೆ: ಅಂಬೇಡ್ಕರ್ ಕೇವಲ ದಲಿತ ಸಮುದಾಯಗಳ ನಾಯಕ ಮಾತ್ರವಲ್ಲ ಆಧುನಿಕ ಭಾರತದ ನಿರ್ಮಾತ್ವಗಳಲ್ಲಿ ಮುಂಚೂಣಿ ಸ್ಥಾನದಲ್ಲಿ ನಿಲ್ಲುವ ಸರ್ವಶ್ರೇಷ್ಠ ಮಹಾನ್ ನಾಯಕ ಮೇಧಾವಿ ಕಾನೂನು ತಜ್ಞ ಸಂವಿಧಾನದ ಶಿಲ್ಪಿಯಾಗಿದ್ದವರು ಎಂದು ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿನಿ ಕುಮಾರಿ ಆಶಾ ಹೇಳಿದರು.
ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಅಯೋಜಿಸಲಾದ ಡಾ.ಬಿ.ಆರ್.ಅಂಬೇಡ್ಕರ್ರವರ 131ನೇ ಜಯಂತಿನಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿದಶೆಯಲ್ಲಿಯೇ ಮಹಾನ್ ನಾಯಕರ ಜೀವನ ಚರಿತ್ರೆಯನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಉತ್ತಮ ಪ್ರಜೆಯಾಗಲು ಸಾಧ್ಯವೆಂದರು.
ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಪಿ.ರಮೇಶ್, ಪ್ರಕಾಶ್ಪಾಲೇಕರ್, ಸುಧೀಂದ್ರ ಪೂಜಾರಿ, ಧನಲಕ್ಷ್ಮಿ, ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಆರ್.ರಾಘವೇಂದ್ರ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ರವರು ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ದೀಮಂತ ನಾಯಕರು ತಮ್ಮ ವಿದ್ಯಾರ್ಥಿ ದಿಸೆಯಲ್ಲಿಯೇ ಹೋರಾಟದ ಮನೋಭಾವನೆಯನ್ನು ಬೆಳಸಿಕೊಂಡು ದಲಿತರ ಶೋಷಿತ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕಾರ್ಯದೊಂದಿಗೆ ಸಮಾಜದಲ್ಲಿ ಸಮಾನತೆ ಸಮಾನತೆಯನ್ನು ಜೊತೆಗೆ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಹೋರಾಡಿದ ಡಾ.ಬಿ.ಅರ್.ಅಂಬೇಡ್ಕರ್ ಸಾಧನೆ ಹಾಗೂ ದೇಶ ನಿರ್ಮಾಣದಲ್ಲಿ ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆಂದರು.