ರಿಪ್ಪನ್‌ಪೇಟೆ: ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

0
291

ರಿಪ್ಪನ್‌ಪೇಟೆ: 2021-22ನೇ ಸಾಲಿನಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2022ರ ಅಡಿಯಲ್ಲಿ ಪ್ರಥಮ ಬಿಎ,ಬಿಬಿಎ ಮತ್ತು ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ದಿಢೀರ್ ಏರಿಕೆ ಮಾಡಿರುವುದನ್ನು ಖಂಡಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಈ ಹಿಂದಿನ ವರ್ಷಗಳಲ್ಲಿ 700 ರೂ. ಇದ್ದ ಪರೀಕ್ಷಾ ಶುಲ್ಕವನ್ನು 2020 ರೂ. ಗೆ ಏರಿಸಿರುವುದು ಖಂಡನಾರ್ಹ. ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕುಟುಂಬಕ್ಕೆ ಸೇರಿದ ವಿದ್ಯಾರ್ಥಿಗಳು ಇಷ್ಟೊಂದು ಅಧಿಕ ಪರೀಕ್ಷಾ ಶುಲ್ಕವನ್ನು ಪಾವತಿಸಲು ಸಮರ್ಥರಿರುವುದಿಲ್ಲ. ಹಾಗೆಯೇ ಪರೀಕ್ಷಾ ಶುಲ್ಕವೂ ಪದವಿ ಪ್ರವೇಶ ಶುಲ್ಕಕ್ಕಿಂತಲೂ ಅಧಿಕವಾಗಿರುವುದರಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲು ಕಷ್ಟವಾಗುತ್ತಿದೆ ಆದ್ದರಿಂದ ಈಗ ನಿಗದಿಪಡಿಸಿರುವ ಪರೀಕ್ಷಾ ಶುಲ್ಕವನ್ನು ವಾಪಸ್ಸು ಪಡೆದು ಈ ಹಿಂದೆ ಇದ್ದ ಪರೀಕ್ಷಾ ಶುಲ್ಕವನ್ನು ಮುಂದುವರೆಯುವಂತೆ ಪ್ರಥಮ ಪದವಿ ವಿದ್ಯಾರ್ಥಿಗಳು ಒತ್ತಾಯಿಸಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ.ಟಿ ರವರು ವಿದ್ಯಾರ್ಥಿಗಳ ಮನವಿಯ ಬಗ್ಗೆ ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಡೆಪ್ಯೂಟಿ ರಿಜಿಸ್ಟರ್‌ರ ಗಮನಕ್ಕೆ ತಂದಿದ್ದು ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕು ಎಂದರು.

ಈ ಸಂದರ್ಭದಲ್ಲಿ ದರ್ಶನ್, ಸುಬ್ರಮಣ್ಯ, ಸೃಜನ, ಸ್ಫೂರ್ತಿ, ಕಿರಣ್, ಅಭಿಷೇಕ್, ಮತ್ತು ಎಲ್ಲಾ ಪ್ರಥಮ ವರ್ಷದ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ ವಿದ್ಯಾರ್ಥಿಗಳು ಹಾಜರಿದ್ದರು.

ಇತ್ತೀಚೆಗೆ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಏಕಾಏಕಿ ಮೂರು ಪಟ್ಟು ಹೆಚ್ಚಿಸಿರುವುದು ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಹೊರೆಯಾಗಿದ್ದು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಪರಿಣಾಮ ಬೀಳುವ ಸಾಧ್ಯತೆಗಳಿವೆ. ಕೂಡಲೇ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ಪರೀಕ್ಷಾ ಶುಲ್ಕವನ್ನು ಈ ಹಿಂದೆ ಇದ್ದಷ್ಟೇ ನಿಗದಿ ಮಾಡಬೇಕಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here