ರಿಪ್ಪನ್‌ಪೇಟೆ ; ಪೊಲೀಸರ ಎದುರಿನಲ್ಲಿಯೇ ಗೃಹ ಸಚಿವರ ಕಾರು ತಡೆದು ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರು !

0
1117

ರಿಪ್ಪನ್‌ಪೇಟೆ: ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುವ ಸಂದರ್ಭದಲ್ಲಿ ರಾಜ್ಯದ ಗೃಹಸಚಿವ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ ಮಾರ್ಗವಾಗಿ ಶಿರಸಿಗೆ ತೆರಳುವಾಗ ಕಾಂಗ್ರೆಸ್ ಪ್ರತಿಭಟನಾ ನಿರತ ಕಾರ್ಯಕರ್ತರು ಸಚಿವರ ವಾಹನ ಅಡ್ಡಗಟ್ಟಿ ಮುತ್ತಿಗೆ ಹಾಕಲು ಮುಂದಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತರನ್ನು ತಡೆದು ಗೃಹಸಚಿವರ ವಾಹನಕ್ಕೆ ದಾರಿ ಮಾಡಿಕೊಡವಲ್ಲಿ ಯಶಸ್ವಿಯಾದರು.

ಸಂತೋಷ ಪಾಟೀಲ್ ಆತ್ಮಹತ್ಯೆಗೆ ಕಮೀಷನ್‌ ದಂಧೆಯೇ ಕಾರಣ. ಬಿಜೆಪಿ ಸರ್ಕಾರದಲ್ಲಿ ಪ್ರತಿಕಾಮಗಾರಿಗೆ ಶೇ.40 ರಷ್ಟು ಕಮೀಷನ್ ನೀಡಬೇಕಿದೆ ಎಂಬುದನ್ನು ಮೊತ್ತೆಮ್ಮೆ ಸಾಬೀತಾಗಿದೆ. ರಾಜ್ಯ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪನವರ ಬೆದರಿಕೆಗೆ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗಾಗಿ ತಕ್ಷಣವೇ ಅವರನ್ನು ಬಂಧಿಸಬೇಕು ಮತ್ತು ಸಂಪುಟದಿಂದ ವಜಾಗೊಳಿಸಬೇಕು ಎಂದು ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನಾ ಸಭೆಯಲ್ಲಿ ಹೊಸನಗರ ತಾಲ್ಲೂಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಜಿ.ಪಂ.ಮಾಜಿ ಸದಸ್ಯ ಬಂಡಿ ರಾಮಚಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ ಹಾರೋಹಿತ್ತಲು, ಜಿಲ್ಲಾ ಕಾಂಗ್ರೆಸ್ ಮುಖಂಡ ಅಮ್ಮೀರ್‌ಹಂಜಾ, ಹೋಬಳಿ ಘಟಕದ ಕಾಂಗ್ರೆಸ್ ಅಧ್ಯಕ್ಷ ಆಸಿಫ್, ತಾ.ಪಂ.ಮಾಜಿ ಸದಸ್ಯ ಎನ್.ಚಂದ್ರೇಶ್,ಜಿ ಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಎಂ.ಎಂ.ಪರಮೇಶ್, ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲಾ ಷರೀಫ್, ಅರಸಾಳು ಗ್ರಾ.ಪಂ.ಅಧ್ಯಕ್ಷ ಉಮಾಕರ್, ಗ್ರಾ.ಪಂ.ಸದಸ್ಯ ಪ್ರಕಾಶ್ ಪಾಲೇಕರ್, ಗಣಪತಿ ಗವಟೂರು, ಸಾರಾಭಿ, ಧನಲಕ್ಷ್ಮಿ, ವೇದಾವತಿ, ಮಹೀದ್ದೀನ್, ಮಂಜುನಾಥ ಮಳವಳ್ಳಿ, ಬಿಎಸ್‌ಎನ್‌ಎಲ್ ಶ್ರೀಧರ್, ಮಂಜುನಾಥ, ಉಲ್ಲಾಸ್ ತೆಕ್ಕೋಲ್, ಶೇಷಪ್ಪ, ರಾಜು ಹೆದ್ದಾರಿಪುರ, ಚಂದ್ರಶೇಖರ ಮಳವಳ್ಳಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಂಜಪ್ಪ, ಹಾಲುಗುಡ್ಡೆ ದೇವರಾಜ್ ಗಂಟೆ ಇನ್ನಿತರ ಮುಖಂಡರು ಕಾರ್ಯಕರ್ತರು ಪಾಲ್ಗೊಂಡು ಮಾತನಾಡಿ, ಸಚಿವ ಕೆ.ಎಸ್.ಈಶ್ವರಪ್ಪ ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರತವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ ಮೃತ ಸಂತೋಷ ಪಾಟೀಲ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಅದಕ್ಕೂ ಮೊದಲು ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಸರ್ಕಾರದಲ್ಲಿ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಈ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಪ್ರತಿಭಟನಾ ಸಭೆಯಲ್ಲಿ ಸರ್ಕಾರವನ್ನು ಪ್ರತಿಭಟನಾ ನಿರತರ ಒಕ್ಕೊರಲ ಆಗ್ರಹವಾಗಿತ್ತು.

ಜಾಹಿರಾತು

LEAVE A REPLY

Please enter your comment!
Please enter your name here