ರಿಪ್ಪನ್‌ಪೇಟೆ ಬಳಿ ಭೀಕರ ಅಪಘಾತ: ಮರಕ್ಕೆ ಗುದ್ದಿದ ಮರಳು ತುಂಬಿದ ಟಿಪ್ಪರ್ ಲಾರಿ !

0
18045

ರಿಪ್ಪನ್‌ಪೇಟೆ: ಅರಸಾಳು ಸಮೀಪದ 9ನೇ ಮೈಲಿಕಲ್ಲು ಬಳಿ ಮರಳು ತುಂಬಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಗುದ್ದಿದ ಪರಿಣಾಮ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ.

ಹೊಸನಗರ ಕಡೆಯಿಂದ ಶಿವಮೊಗ್ಗ ಕಡೆಗೆ ಮರಳು ತುಂಬಿಕೊಂಡು ಚಲಿಸುತ್ತಿದ್ದ ಲಾರಿ ಇದಾಗಿದ್ದು ಇಂದು ಬೆಳಗಿನಜಾವ ಸುಮಾರು 4 ರಿಂದ 4.30 ರ ಸಮಯದಲ್ಲಿ ಈ ಘಟನೆ ನಡೆದಿದೆ.

ಲಾರಿಯಲ್ಲಿ ಸಿಲುಕಿದ್ದ ಗಂಭೀರ ಸ್ಥಿತಿಯಲ್ಲಿದ್ದ ಚಾಲಕನನ್ನು ಜೆಸಿಬಿ ಯಂತ್ರದ ಮೂಲಕ ಹೊರತೆಗೆದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಚಾಲಕ ನಿದ್ದೆ ಮಂಪರಿನಲ್ಲಿ ಇದ್ದುದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ‘ಮಲ್ನಾಡ್ ಟೈಮ್ಸ್’ಗೆ ತಿಳಿಸಿದ್ದಾರೆ. ಚಾಲಕ ಹೊಸನಗರ ಮೂಲದವನು ಎಂದು ಹೇಳಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here