Home Accident ರಿಪ್ಪನ್ಪೇಟೆ ಬಳಿ ಭೀಕರ ಅಪಘಾತ ; ಓರ್ವ ಸ್ಥಳದಲ್ಲೇ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ !
ರಿಪ್ಪನ್ಪೇಟೆ: ಇಲ್ಲಿನ ಹೊಸನಗರ ರಸ್ತೆಯ ಗವಟೂರು ಶಾಲೆಯ ಬಳಿ ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.
ಮೃತರು ಹುಂಚ ಬಳಿಯ ಹೊನ್ನೆಬೈಲು ನಿವಾಸಿಯಾಗಿದ್ದು ಗಂಭೀರವಾಗಿ ಗಾಯಗೊಂಡಿರುವವರನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ತಂದೆ ಮತ್ತು ಮಗ ಒಂದೇ ಬೈಕ್ ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
ಈ ಅಪಘಾತ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.
ಈ ಪ್ರಕರಣ ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Related