ರೈತರನ್ನ ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ; ಹರತಾಳು ಹಾಲಪ್ಪ

0
227

ಸಾಗರ: ಮೀಸಲು ಅರಣ್ಯದ ಹೆಸರಿನಲ್ಲಿ ಈ ಕ್ಷೇತ್ರದ ಯಾವುದೇ ಗ್ರಾಮದ ರೈತರನ್ನು‌ ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದ್ದಾರೆ.

ತಾಲ್ಲೂಕಿನ ಚಿಕ್ಕನೆಲ್ಲೂರು ಗ್ರಾಮದಲ್ಲಿ‌ ಅರಣ್ಯ ವ್ಯವಸ್ಥಾಪನಾ ಸಮಿತಿಯಿಂದ ಗುರುವಾರ ನಡೆದ ರೈತರ ಸಾಗುವಳಿ ಸಕ್ರಮೀಕರಣ ಅರ್ಜಿಯನ್ನು ಪರಿಶೀಲಿಸುವ ಸಭೆಯಲ್ಲಿ ಮಾತನಾಡಿದರು.

ತಾಲ್ಲೂಕಿನ ಚಿಕ್ಕನೆಲ್ಲೂರು ಗ್ರಾಮದಲ್ಲಿ ಅರಣ್ಯ ವ್ಯವಸ್ಥಾಪನಾ ಸಮಿತಿಯಿಂದ ಗುರುವಾರ ನಡೆದ ರೈತರ ಸಾಗುವಳಿ ಸಕ್ರಮೀಕರಣ ಅರ್ಜಿಯನ್ನು ಪರಿಶೀಲಿಸುವ ಸಭೆಯಲ್ಲಿ ಮಾತನಾಡಿದರು.

‘ಉಳುಮೆ ಮಾಡಿಕೊಂಡಿರುವ ರೈತರನ್ನು ಒಕ್ಕಲೆಬ್ಬಿಸುವುದಕ್ಕೆ ನನ್ನ ವಿರೋಧವಿದೆ. ಉಳುವವನೇ ಹೊಲದೊಡೆಯ ಎಂಬ ಕಾನೂನು ಜಾರಿಗೊಳ್ಳಲು ಕಾರಣವಾದ ನೆಲದಲ್ಲಿ ಉಳುವವರನ್ನು ಒಕ್ಕಲೆಬ್ಬಿಸುವುದು ಸಾಧ್ಯವಿಲ್ಲ. ಹೊಸದಾಗಿ ಭೂಮಿಯನ್ನು ಒತ್ತುವರಿ ಮಾಡುವವರಿಗೆ ನನ್ನ ಬೆಂಬಲವಿಲ್ಲ. ಆದರೆ, ಲಾಗಾಯ್ತಿನಿಂದಲೂ ಕೃಷಿ ಚಟುವಟಿಕೆ ನಡೆಸುತ್ತಿರುವ ಮತ್ತು ಮನೆ ಕಟ್ಟಿಕೊಂಡು ವಾಸವಾಗಿರುವವರಿಗೆ ತೊಂದರೆಯಾಗಲುಮಅವಕಾಶ ನೀಡುವುದಿಲ್ಲ’ ಎಂದು ಹೇಳಿದರು.

‘ಮೀಸಲು ಅರಣ್ಯದ ಹೆಸರಿನಲ್ಲಿ ರೈತರಿಗೆ ಅರಣ್ಯ ಇಲಾಖೆಯಿಂದ ನೋಟಿಸ್ ನೀಡುತ್ತಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಈ ಸಂಬಂಧ ಯಾರೂ ಆತಂಕಪಡುವ ಅಗತ್ಯವಿಲ್ಲ. ಜಿಲ್ಲಾಧಿಕಾರಿ ಹಾಗೂ ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಕುರಿತು ಗಮನ ಸೆಳೆದು ರೈತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ‘ಮಲೆನಾಡಿನ ಅರಣ್ಯಭೂಮಿ ಸಮಸ್ಯೆ ಕುರಿತು ಶಾಸಕರು ಸದನದಲ್ಲಿ ಧ್ವನಿ ಎತ್ತಬೇಕಿದೆ. ಸುಮ್ಮನೆ ಕುಳಿತರೆ ಈ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಮುಖ್ಯಮಂತ್ರಿ ಗಮನಕ್ಕೂ ಈ ವಿಷಯವನ್ನು ತರಲಾಗುವುದು’ ಎಂದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ‘ಜನ ವಸತಿ ಇರುವ ಪ್ರದೇಶವನ್ನು ಮೀಸಲು ಅರಣ್ಯ ಎಂದು ಪರಿಗಣಿಸುವುದೇ ಅವೈಜ್ಞಾನಿಕ. ಈ ನೆಲೆಯಲ್ಲಿ ಸಮಸ್ಯೆಯನ್ನು ಅವಲೋಕಿಸುವ ಮೂಲಕ ನೊಂದಿರುವ ರೈತರಿಗೆ ನ್ಯಾಯ ಒದಗಿಸಬೇಕಿದೆ’ ಎಂದು ಒತ್ತಾಯಿಸಿದರು.

ಎಪಿಎಂಸಿ ಸದಸ್ಯ ಕೆ.ಹೊಳಿಯಪ್ಪ, ಮಹಾಬಲ ಮನೆಘಟ್ಟ, ವೆಂಕಟೇಶ್ ಬೆಳೆಯೂರು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ದೇವೇಂದ್ರಪ್ಪ ಯಲಕುಂದ್ಲಿ, ದೇವರಾಜ್, ಲಕ್ಷ್ಮಣ್, ವಲಯ ಅರಣ್ಯಾಧಿಕಾರಿ ಪ್ರಮೋದ್ ಡಿ.ಆರ್. ಉಪವಲಯ ಅರಣ್ಯಾಧಿಕಾರಿ ಚೇತನ್, ಅರಣ್ಯ ವ್ಯವಸ್ಥಾಪನಾ ಸಮಿತಿಯ ಅಧಿಕಾರಿ ಸುಬ್ರಾಯ ಕಾಮತ್, ಸರ್ವೆ ಇಲಾಖೆಯ ಉಮೇಶ್ ಇದ್ದರು.

ಜಾಹಿರಾತು

LEAVE A REPLY

Please enter your comment!
Please enter your name here