ರೈತರಿಗೆ ವಿಶೇಷ ಮಾಹಿತಿ: ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕದೋಷ ಹಿನ್ನೆಲೆ ಉತ್ಪಾದನೆ ಕುಂಠಿತ | ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ…!

0
473

ಶಿವಮೊಗ್ಗ: ಕರ್ನಾಟಕ ಪವರ್ ಕಾರ್ಪೋರೇಷನ್, ಯುಪಿಸಿಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದರಿಂದ, ಕೆಲವು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಹಿನ್ನಲೆಯಲ್ಲಿ ಬೇಡಿಕೆಯಷ್ಟು ವಿದ್ಯುತ್ ಪೂರೈಕೆಯಾಗುತ್ತಿಲ್ಲ.

ಕೆ.ಪಿ.ಸಿ ನಿಂದ ಸುಮಾರು 2864MW, ಯುಪಿಸಿಲ್‌ನಿಂದ ಸುಮಾರು 1010 MW ರಷ್ಟು ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳಿಂದ 407 MW, ಹೀಗೆ ರಾಜ್ಯದ ವಿದ್ಯುತ್ ಜಾಲವು, ಒಟ್ಟು 4281 MV ನಷ್ಟು ಪ್ರಮಾಣದ ವಿದ್ಯುತ್ ಕೊರತೆಯನ್ನು ಎದುರಿಸುತ್ತಿದೆ. ಇದರಿಂದಾಗಿ ಮೆಸ್ಕಾಂಗೆ ಹಂಚಿಕೆಯಾಗುವ ವಿದ್ಯುತ್ ಪ್ರಮಾಣದಲ್ಲಿ ಸುಮಾರು 200MW ನಷ್ಟು ಕೊರತೆಯಾಗುವ ಸಂಭವವಿದೆ.

ಆದುದರಿಂದ State Load Dispatch Center ನ ಸೂಚನೆಯಂತೆ ಮೆಸ್ಕಾಂ ವ್ಯಾಪ್ತಿಯ ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಗಳಲ್ಲಿ, ವಿದ್ಯುತ್ ಜಾಲದ ಸುರಕ್ಷತೆಯ ದೃಷ್ಟಿಯಿಂದ ಅನಿಯಮಿತವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಕಂಡುಬರಬಹುದು.

ನೀರಾವರಿ ಪಂಪ್‌ಸೆಟ್ ಗಳಿಗೆ ಬೆಳಿಗ್ಗೆ 9.00 ರಿಂದ ಸಂಜೆ 4.00 ರವರೆಗೆ ಮತ್ತು ಮಧ್ಯರಾತ್ರಿಯಿಂದ ಬೆಳಗ್ಗೆ 4.00 ರವರೆಗೆ ಮಾತ್ರ ವಿದ್ಯುತ್ ಪೂರೈಕೆ ಸಾಧ್ಯವಾಗಿದೆ.

ಮುಂದಿನ ವಾರದ ವೇಳೆಗೆ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆ ನಿರೀಕ್ಷಿಸಲಾಗಿದ್ದು, ಅಲ್ಲಿಯವರೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಹಿರಾತು

LEAVE A REPLY

Please enter your comment!
Please enter your name here