ರೋಹಿತ್ ಚಕ್ರತೀರ್ಥ ಬಂಧನಕ್ಕೆ ಒತ್ತಾಯಿಸಿ ಜೆಡಿಎಸ್ ಪ್ರತಿಭಟನೆ

0
74

ಚಿಕ್ಕಮಗಳೂರು : ರಾಷ್ಟ್ರಕವಿ ಕುವೆಂಪುರವರನ್ನು ಅವಹೇಳನ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ನಗರದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಎಸ್ .ಎಲ್. ಭೋಜೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಯಾವ ಅರ್ಹತೆಯ ಆಧಾರದಲ್ಲಿ ಈ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಪ್ರಶ್ನಿಸಿದರು.

ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ಗಣ್ಯರ ಪಠ್ಯಗಳನ್ನು ತೆಗೆದುಹಾಕಿ, ಕೋಮು ವಿಷ ಬೀಜ ಬಿತ್ತುವ ಪಠ್ಯಗಳನ್ನು ಸೇರಿಸುತ್ತಿರುವ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ನಂತರ ಪ್ರತಿಭಟನಗಾರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಗಳನ್ನ ಭೇಟಿ ಮಾಡಿ ಮನವಿ ಸಲ್ಲಿಸಿ ಕುವೆಂಪುರವರಿಗೆ ಅವಹೇಳನ ಮಾಡಿರುವ ಈ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿ ನಡೆಸಬೇಕೆಂದು ಒತ್ತಾಯಿಸಿದರು.

ಹೊಲದಗದ್ದೆ ಗಿರೀಶ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here