ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

0
4322

ಹೊಸನಗರ: ಆನಂದಪುರ ಕಡೆಯಿಂದ ಹೊಸನಗರಕ್ಕೆ ಬರುತ್ತಿದ್ದ ಬೈಕ್ ಸವಾರ ರಸ್ತೆ ಗುಂಡಿ ತಪ್ಪಿಸಲು ಹೋಗಿ ಎದುರಿನಿಂದ ಬಂದ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾರುತಿಪುರ ಸಮೀಪ ಹೊಸಮನೆಯಲ್ಲಿ ಸಂಭವಿಸಿದೆ.

ಮೃತ ಬೈಕ್ ಸವಾರನ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದ್ದು, ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದ ಲಾರಿ ಚಾಲಕನನ್ನು ಸ್ಥಳಿಯರು ಹಿಂಬಾಲಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here