ಭದ್ರಾವತಿ : ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಾಚೇನಹಳ್ಳಿ ಡೈರಿ ಬಳಿ ನಡೆದಿದೆ.


ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಸಂಚರಿಸುತ್ತಿದ್ದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ಕಾರು ಸಂಪೂರ್ಣ ಜಖಂಗೊಂಡಿದೆ

ಮೃತರನ್ನು ಭದ್ರಾವತಿಯ ಪೇಪರ್ ಟೌನ್ ನಿವಾಸಿಗಳಾದ ಷಣ್ಮುಖ (39) ಮತ್ತು ರಾಮಚಂದ್ರ (40) ಎಂದು ಗುರುತಿಸಲಾಗಿದೆ.
