ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ದಾಸರಾಗದೇ ಉತ್ತಮ ಸತ್ಪ್ರಜೆಗಳಾಗಿ ರೂಪುಗೊಂಡು ಕಾನೂನುಗಳನ್ನು ಪಾಲಿಸಬೇಕು: ಆರ್.ಡಿ. ಮರಳಸಿದ್ದಪ್ಪ ಕರೆ

0
397

ಸೊರಬ: ಅಧ್ಯಯನ ಅವಧಿಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ದಾಸರಾಗದೇ ಉತ್ತಮ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಹಾಗೂ ಕಾನೂನುಗಳನ್ನು ಪಾಲಿಸಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ಆರ್.ಡಿ. ಮರಳಸಿದ್ದಪ್ಪ ಕರೆ ನೀಡಿದರು.

ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಪೊಲೀಸ್ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಗುರುವಾರ ಹಮ್ಮಿಕೊಂಡ “ಅಪರಾಧಗಳು ಮತ್ತು ಸಂಚಾರಿ ನಿಯಮಗಳ” ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಧ್ಯಯನದ ಅವಧಿಯಲ್ಲಿ ಮಾದಕ ವಸ್ತುಗಳ ವ್ಯಸನಿಗಳಾದರೆ ಭವಿಷ್ಯವನ್ನು ಸಂಪೂರ್ಣ ನಾಶ ಮಾಡಿಕೊಳ್ಳುತ್ತೀರಿ ಎಂದು ಎಚ್ಚರಿಕೆ ನೀಡಿ, ಶಾಲಾ-ಕಾಲೇಜ್ ಅವರಣದಲ್ಲಿ ರ‍್ಯಾಗಿಂಗ್‌, ಮಾದಕ ವಸ್ತುಗಳ ಮಾರಾಟ ಸೇರಿದಂತೆ ಅಪರಾಧ ಕೃತ್ಯಗಳು ಕಂಡುಬಂದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆಯೊಂದಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ಪಿಎಸ್‍ಐ ಟಿ.ಬಿ. ಪ್ರಶಾಂತ್ ಕುಮಾರ್ ಮಾತನಾಡಿ, ಅಪ್ರಾಪ್ತರು ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ. 18 ವರ್ಷ ತುಂಬಿದ ಯುವಜನತೆ ಕಡ್ಡಾಯವಾಗಿ ಚಾಲನ ಪರವಾನಗಿ ಮಾಡಿಸಿಕೊಂಡು ವಾಹನ ಚಲಾಯಿಸಬೇಕು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದ ಅವರು, ಕೋವಿಡ್ ಸೋಂಕು ತಡೆಗೆ ಸಾರ್ವಜನಿಕವಾಗಿ ಸಂಚಾರಿಸುವಾಗ ಮಾಸ್ಕ್ ಧರಿಸುವುದು. ನಿಯಮಿತವಾಗಿ ಕೈ-ಬಾಯಿ ಸ್ವಚ್ಛತೆ ಹಾಗೂ ಸ್ಯಾನಿಟೈಸರ್ ಮಾಡಿಕೊಳ್ಳುವಂತೆ ಅರಿವು ಮೂಡಿಸಿದರು.

ತುರ್ತು ಸಂದರ್ಭಗಳಲ್ಲಿ ರಕ್ಷಣೆಗಾಗಿ ಪೊಲೀಸರ ಸಂಪರ್ಕಕ್ಕಾಗಿ ಹೊಸದಾಗಿ ಜಾರಿಗೆ ಬಂದಿರುವ 112 ಸಹಾಯವಾಣಿಗೆ ಸಂಖ್ಯೆಗೆ ಕರೆ ಮಾಡಬಹುದು ಎಂದು ತಿಳಿಸಿದರು.

ಎಎಸ್‍ಐ ಚಿನ್ನಪ್ಪ, ಸಿಬ್ಬಂದಿ ಜಗದೀಶ ಬೇಲೂರಪ್ಪನವರ್, ಬಂಗಾರಪ್ಪ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here