ವಿದ್ಯಾರ್ಥಿಗಳ ಪ್ರಗತಿಗೆ ಪೋಷಕರ ಸಹಕಾರ ಅಗತ್ಯ: ಪ್ರಾಚಾರ್ಯ ಮಂಜುನಾಥ್

0
371

ರಿಪ್ಪನ್‌ಪೇಟೆ: ಇಡೀ ಜಗತ್ತನ್ನೆ ತಲ್ಲಣಗೊಳಿಸಿರುವ ಕೊರೊನಾ ಸೋಂಕು ಶೈಕ್ಷಣಿಕ ಕ್ಷೇತ್ರದಲ್ಲೂ ತನ್ನ ಕರಿನೆರಳನ್ನು ಚಾಚುವುದರ ಮೂಲಕ ತನ್ನ ಅಟ್ಟಹಾಸವನ್ನು ಮುಂದುವರಿಸಿಕೊಂಡು ಹೋಗುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರೆಯಲು ಪೋಷಕರ ಸಹಕಾರ ಅಗತ್ಯ ಎಂದು ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎ. ಮಂಜುನಾಥ್ ಹೇಳಿದರು.

ರಿಪ್ಪನ್‌ಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಕುರಿತು ಆಯೋಜಿಸಲಾಗಿದ್ದ ಪೋಷಕರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ಆಡಚಣೆ ಮತ್ತು ಆತಂಕ ಉಂಟಾಗದಿರಲೆಂದು ಆನ್‌ಲೈನ್ ಮತ್ತು ಆಫ್‌ಲೈನ್ ತರಗತಿಗಳು ನಡೆಸುವ ಮೂಲಕ ಶೈಕ್ಷಣಿಕ ಪ್ರಗತಿಗೆ ದಿಟ್ಟ ಹೆಚ್ಚೆ ಇಟ್ಟಿದೆ. ಇನ್ನೂ ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ದತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದೆ. ಕಾಲೇಜಿನ ವತಿಯಿಂದ ಈಗಾಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿ ಪರೀಕ್ಷೆಗಳನ್ನು ನಡೆಸಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನಮ್ಮ ಕಾಲೇಜಿನ ಉಪನ್ಯಾಸಕ ತಂಡ ಹಗಲಿರುಳು ಶ್ರಮಿಸುತ್ತದೆ. ಇದಕ್ಕೆ ಪೋಷಕರು ತುಂಬು ಹೃದಯದ ಸಹಕಾರ ನೀಡುವುದರ ಜೊತೆಗೆ ಮೋಬೈಲ್ ವೀಕ್ಷಣೆಗೆ ಕಡಿವಾಣ ಹಾಕುವುದರ ಮೂಲಕ ದಿನ ನಿತ್ಯ ತಮ್ಮ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳತ್ತ ಗಮನ ಹರಿಸಬೇಕು ಆಗ ಮಕ್ಕಳು ಓದಿನಲ್ಲಿ ಆಸಕ್ತಿ ವಹಿಸಿ ಪಠ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರ ಮೂಲಕ ಉತ್ತಮ ಅಂಕಗಳನ್ನು ಗಳಿಸಲು ಸಹಕಾರಿಯಾಗುವುದು ಎಂದರು.

ಸಭೆಯಲ್ಲಿ ಕಾಲೇಜು ಅಭಿವೃದ್ದಿ ಸಮಿತಿಯ ಸದಸ್ಯ ಸುರೇಶ್ ಸಿಂಗ್, ಕಾಲೇಜಿನ ಹಿರಿಯ ಉಪನ್ಯಾಸಕರಾದ ಗೋಪಿಕಾ, ಗಣಪತಿ, ರಾಜೇಶ್ ಬೋಳಾರ್, ಅರಣ್ ರಾಜ್ ಹಾಗೂ ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here