ವಿದ್ಯಾರ್ಥಿ ಜೀವನದಿಂದಲೇ ಸೇವಾ ಮನೋಭಾವ ಬೆಳೆಸಲು ಪ್ರೇರೆಪಿಸಬೇಕು ; ಸತ್ಯನಾರಾಯಣ

0
442

ಹೊಸನಗರ: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಯ ಜೀವನದಿಂದಲೇ ಸೇವಾ ಮನೋಭಾವ ಬೆಳೆಸಲು ಪ್ರೇರೆಪಿಸಬೇಕು ಎಂದು ಎಸ್‌ಡಿಎಂಸಿ ಸದಸ್ಯ ಸತ್ಯನಾರಾಯಣರವರು ಹೇಳಿದರು.

ಹೊಸನಗರ ಪದವಿ ಪೂರ್ವ ಕಾಲೇಜ್ ಹೈಸ್ಕೂಲ್ ವಿಭಾಗ ಎನ್‌ಎಸ್‌ಎಸ್ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮ್ಮನಘಟ್ಟದ ಜೇನುಕಲ್ಲಮ್ಮ ದೇಗುಲದಲ್ಲಿ ಒಂದು ದಿನದ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೇವೆ ಮಾಡುವ ಮನೋಬಾವ ವಿದ್ಯಾರ್ಥಿ ಜೀವನದಿಂದಲೇ ಪ್ರಾರಂಭವಾದರೆ ಆ ವ್ಯಕ್ತಿಯ ಜೀವನದ ಉದ್ದಕ್ಕೂ ಸೇವೆ ಮಾಡುತ್ತಿರುತ್ತಾನೆ. ಮನುಷ್ಯರಲ್ಲಿ ಸೇವೆ ಮಾಡುವ ಮನಸ್ಸಿದ್ದರೆ ಸಾಕು ಎಂದರು.

ಈ ಕಾರ್ಯಕ್ರಮವು ಜೇನುಕಲ್ಲಮ್ಮ ದೇವಸ್ಥಾನದ ಆಡಳಿತ ಮಂಡಳಿಯ ನಿರ್ದೆಶನದ ಮೇರೆಗೆ ಕಾರ್ಯಕ್ರವನ್ನು ಆಯೋಜಿಸಲಾಗಿದ್ದು ದೇವಸ್ಥಾನದ ಸುತ್ತ-ಮುತ್ತ ಸ್ವಚ್ಛತೆ, ಅನುಪಯುಕ್ತ ಪ್ಲಾಸ್ಟಿಕ್ ವಸ್ತುಗಳ ವಿಲೇವಾರಿಯನ್ನು ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದರು.

ಎನ್‌ಎಸ್‌ಎಸ್ ನೋಡಲ್ ಅಧಿಕಾರಿ ಸುಹಾಸ್‌ರವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು ಪ್ರೌಡ ಶಾಲಾ ವಿಭಾಗದ ಶಿಕ್ಷಕರು ಎಸ್‌ಡಿಎಂಸಿ ಸದಸ್ಯರು ಸೇವಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here