ಮೂಡಿಗೆರೆ: ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದಿದ್ದು ಕೂದಲೆಳೆ ಅಂತರದಿಂದ ಪ್ರಯಾಣಿಕರು ಪಾರಾದ ಘಟನೆ ತಾಲ್ಲೂಕಿನ ಅತ್ತಿಗೆರೆ ಸಮೀಪ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅತ್ತಿಗೆರೆ ಸಮೀಪ ವಿದ್ಯುತ್ ಕಂಬಕ್ಕೆ ಬೆಳಗಿನ ಜಾವ ಐದು ಗಂಟೆಗೆ ಡಿಕ್ಕಿ ಹೊಡೆದು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಅಪಘಾತದಲ್ಲಿ ಚಾಲಕನಿಗೆ ಸಣ್ಣ-ಪುಟ್ಟ ಗಾಯವಾಗಿದ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬಣಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related