ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿಗಾಹುತಿಯಾದ ದನದ ಕೊಟ್ಟಿಗೆ ; ಸಾವಿರಾರು ರೂ. ಮೌಲ್ಯದ ಒಣ ಹುಲ್ಲು ಭಸ್ಮ!

0
427

ತೀರ್ಥಹಳ್ಳಿ: ತಾಲೂಕಿನ ತ್ರಯಂಬಕಪುರ ಗ್ರಾಮ‌ ಪಂಚಾಯತಿ ವ್ಯಾಪ್ತಿಯ ಅಕ್ಲಾಪುರ ಗ್ರಾಮದ ಹಿತ್ತಲಸರ ರಾಮಸ್ವಾಮಿಯವರ ಮನೆಯ ದನದ ಕೊಟ್ಟಿಗೆ ಸೋಮವಾರ ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿ ಕೊಟ್ಟಿಗೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ದನಗಳಿಗೆ ಮೇವಿಗಾಗಿ ದಾಸ್ತಾನಿಟ್ಟ ಒಣಹುಲ್ಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಬೆಂಕಿ ನಂದಿಸಿ ಆಗಬಹುದಾಗಿದ್ದ ದೊಡ್ಡ ಅವಘಡವನ್ನು ತಪ್ಪಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ಆರಿಸಿದ್ದಾರೆಂದು ತಿಳಿದುಬಂದಿದೆ.

ಅದೃಷ್ಟವಶಾತ್ ಮೇಯಲು ಬಿಟ್ಟ ದನಗಳು ಇನ್ನೂ ಕೊಟ್ಟಿಗೆಗೆ ಬಂದಿರಲಿಲ್ಲ ಎನ್ನಲಾಗಿದೆ.

ವರದಿ: ರಶ್ಮಿ ಶ್ರೀಕಾಂತ್ ನಾಯಕ್
ಜಾಹಿರಾತು

LEAVE A REPLY

Please enter your comment!
Please enter your name here