ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ ಡಿ.ಎಸ್. ಅರುಣ್ ನಾಮಪತ್ರ ಸಲ್ಲಿಕೆ

0
200

ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಿ.ಎಸ್. ಅರುಣ್ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ವಿಧಾನ ಪರಿಷತ್ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದ್ದು, ಶಿವಮೊಗ್ಗ ಕ್ಷೇತ್ರದಿಂದ ಉತ್ಸಾಹಿ ಹಾಗೂ ಯುವ ನಾಯಕ ಡಿ.ಎಸ್. ಅರುಣ್ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಅವರು ಹೆಚ್ಚಿನ ಮತದಿಂದ ಗೆದ್ದು ಬರಲಿ ಎಂದು ಸಂಸದ ಬಿ.ವೈ ರಾಘವೇಂದ್ರ ಈ ವೇಳೆ ಶುಭ ಹಾರೈಸಿದ್ದಾರೆ.

ಅವರು ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನೂತನ ಅಭ್ಯರ್ಥಿ ಡಿ.ಎಸ್. ಅರುಣ್ ಅವರಿಗೆ ಪಕ್ಷದ ವತಿಯಿಂದ ಸ್ವಾಗತಿಸಿ ಮಾತನಾಡಿ, ಭಾರತೀಯ ಜನತಾ ಪಕ್ಷವು ಮತ್ತೆ ಉತ್ತಮ ಕಾರ್ಯಕರ್ತರನ್ನು ಗುರುತಿಸಿದೆ ಎಂದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್. ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಭಾನುಪ್ರಕಾಶ್, ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ್ರು. ಆಯನೂರು ಮಂಜುನಾಥ್ ಇತರರು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here