ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರಿಂದ ಮನವಿ

0
136

ಶಿಕಾರಿಪುರ : ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯಂತೆ ವೇತನ ನೀಡುವುದು, ಎನ್.ಪಿ‌.ಎಸ್ ರದ್ದತಿ, ನಿಶ್ಚಿತ ಪಿಂಚಣಿ ಮರು ಸ್ಥಾಪನೆ, ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿ, ಶಿಕ್ಷಕರು ಮುಖ್ಯ ಉಪಾಧ್ಯಾಯರು ಉಪನ್ಯಾಸಕರು ಪ್ರಾಂಶುಪಾಲರ ಸಮಸ್ಯೆಗಳಿಗೆ ಪರಿಹಾರ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಶಿಕಾರಿಪುರ ತಾಲ್ಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಂದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುವ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ಮಂಗಳವಾರ ಏರ್ಪಡಿಸಲಾಯಿತು.

ಮನವಿ ಸಲ್ಲಿಸುತ್ತಾ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆಯ ಅಧ್ಯಕ್ಷ ಮಧುಕೇಶ್ವರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ರವರ ಸೂಚನೆ ಮೇರೆಗೆ ನಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಜನಪ್ರತಿನಿಧಿಗಳಾದ ಶಾಸಕರು ಸಚಿವರು ಸಂಸದರಿಗೆ ಇಂದು ಮನವಿ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ನಮ್ಮ ಮನವಿಯನ್ನು ಸಂಸದರು ಶಾಸಕರು ಸಚಿವರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪರವರು ಸೇರಿ ರಾಜ್ಯದ ಮುಖ್ಯಮಂತ್ರಿಗಳಿಗೆ ತಿಳಿಸುವುದರ ಮೂಲಕ ನಮ್ಮ ಬೇಡಿಕೆ ಈಡೇರಿಕೆಗೆ ಸಹಕರಿಸಬೇಕು ಎಂದು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲೆಯ ಸಂಸದ ಬಿ.ವೈ ರಾಘವೇಂದ್ರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೊರೊನದಂತಹಾ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರು ತಮ್ಮ ಒಂದು ತಿಂಗಳ ವೇತನವನ್ನು ರಾಜ್ಯ ಸರ್ಕಾರಕ್ಕೆ ನೀಡಲಾಗಿತ್ತು. ಇದು ಒಂದು ಕೋಟಿ ರೂಪಾಯಿಗೂ ಅಧಿಕವಾಗಿತ್ತು. ಅಂತಹಾ ಸಂಕಷ್ಟದ ಸಮಯದಲ್ಲಿ ಸಹಕಾರ ಮಾಡಿದ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗಾಗಿ ತಾವು ಮತ್ತು ಬಿ.ಎಸ್ ಯಡಿಯೂರಪ್ಪರವರು ರಾಜ್ಯದ ಮುಖ್ಯಮಂತ್ರಿಗಳಿಗೆ ಸಲಹೆ ಸಹಕಾರ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ನಂತರ ಮಾತನಾಡಿದ ಎಂಎಡಿಬಿ ಅಧ್ಯಕ್ಷ ಕೆ.ಎಸ್ ಗುರುಮೂರ್ತಿ, ಶಾಸಕಾಂಗ ಕಾರ್ಯಾಂಗ ನ್ಯಾಯಾಂಗ ಹಾಗೂ ಪತ್ರಿಕಾರಂಗ ಒಟ್ಟಾಗಿ ಸೇರಿ ಸಮಾಜದ ಏಳಿಗೆಗೆ ಪೂರಕವಾಗಿ ಕೆಲಸ ನಿರ್ವಹಿಸುತ್ತಿದ್ದು, ಶಾಸಕಾಂಗದಲ್ಲಿ ಪಾಸಾದ ಬಿಲ್ ಗಳನ್ನು ಕಾರ್ಯರೂಪಕ್ಕೆ ತರಲು ಕಾರ್ಯಾಂಗದ ಅವಶ್ಯಕತೆ ಇದೆ. ತಾಲ್ಲೂಕಿನ ರಾಜ್ಯ ಸರ್ಕಾರಿ ನೌಕರರು ತಾಲ್ಲೂಕಿನ ಅಭಿವೃದ್ಧಿ ಯೋಜನೆಗೆ ಕೈಜೋಡಿಸಿ ಕೆಲಸ ನಿರ್ವಹಿಸಿದ್ದೀರಿ, ಬಿ.ಎಸ್ ಯಡಿಯೂರಪ್ಪರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರಿ ನೌಕರರ ಹಿತ ಕಾಯುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಈರಮ್ಮ, ರಾಮಚಂದ್ರಪ್ಪ, ಅರುಣ್, ಗದಿಗಯ್ಯ, ಹೂವಾನಾಯ್ಕ್, ಕಾರ್ಯದರ್ಶಿ ಬಸವನಗೌಡ ಪಣ್ತಿ, ಖಜಾಂಚಿ ಕೇಶವ, ರಾಜ್ಯ ಪರಿಷತ್ ಎಸ್ ಬಿ ವಿಶ್ವನಾಥ್, ಗೌರವಾಧ್ಯಕ್ಷ ರೇಣುಕಪ್ಪ, ಹಿರಿಯ ಉಪಾಧ್ಯಕ್ಷ ಪುರುಷೋತ್ತಮ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here