ಸಾಗರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಾಸ್ಪಾಡಿಯ ಮಳಲಿಕೊಪ್ಪದಲ್ಲಿ ನಡೆದಿದೆ.
ರಾಜೇಶ್ವರಿ ಮೃತ ಗೃಹಿಣಿರಾಗಿದ್ದು, ಎರಡ್ಮೂರು ಬಾರಿ ಗರ್ಭಪಾತವಾದ್ದರಿಂದ ಬೇಸರಗೊಂಡು ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅನುಮಾನಿಸಲಾಗಿದೆ.
ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಸೋಮವಾರ ಬೆಳಗ್ಗೆ ರಾಜೇಶ್ವರಿ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.