ವೈದ್ಯರ ನೆರವಿನಿಂದ ಸೂಕ್ತ ಚಿಕಿತ್ಸೆ ಪಡೆಯುವುದು ಉತ್ತಮ: ಡಾ. ಜೆ.ಪಿ ಕೃಷ್ಣೇಗೌಡ

0
314

ಚಿಕ್ಕಮಗಳೂರು: ಮನುಷ್ಯನು ಹುಟ್ಟಿನಿಂದ ಸಾವಿನವರೆಗೂ ಹಲವು ರೀತಿಯ ರೋಗರುಜಿನಗಳಿಗೆ ತುತ್ತಾಗುತ್ತಾನೆ. ಆದರೆ ಯಾವುದೇ ಖಾಯಿಲೆಗಳು ಎದುರಾದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ರಾಜ್ಯಪ್ರಶಸ್ತಿ ಪುರಸ್ಕೃತರಾದ ಡಾ. ಜೆ.ಪಿ. ಕೃಷ್ಣೇಗೌಡ ತಿಳಿಸಿದರು.

ನಗರದ ಹೊರವಲಯದ ಖಾಸಗಿ ರೆಸಾರ್ಟ್‍ವೊಂದರಲ್ಲಿ ಕರ್ನಾಟಕ ಎಂಡೋಕ್ರೈನ್ ಸೊಸೈಟಿ ವತಿಯಿಂದ ಆಯೋಜಿಸಲಾಗಿದ್ದ ಹಾರ್ಮೋನಿ ರಿದಮ್ 2022 ರಾಜ್ಯಮಟ್ಟದ 4 ನೇ ವಾರ್ಷಿಕ ಮಹಾಸಮ್ಮೇಳವನ್ನು ಉದ್ಘಾಟಿಸಿ ಮಾತನಾಡಿ, ವೈದ್ಯರು ಯಾವುದೇ ಮಾನಸಿಕ ಒತ್ತಡಕ್ಕೆ ಒಳಗಾಗದೆ ಹೆಚ್ಚು ಕ್ರಿಯಾಶೀಲರಾಗಬೇಕು, ಆಧುನಿಕ ಯುಗದಲ್ಲಿ ವೈದ್ಯರಿಗೆ ಹೆಚ್ಚು ಅನುಕೂಲವಾಗುವಂತೆ ಕರ್ನಾಟಕ ಎಂಡೋಕ್ರೈನ್ ಸೊಸೈಟಿ ಪ್ರತಿ ವರ್ಷ ಬೇರೆ ವಿವಿಧ ಜಿಲ್ಲೆಗಳಲ್ಲಿ ರಾಜ್ಯಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ರಾಜ್ಯದ ಎಲ್ಲಾ ವೈದ್ಯರನ್ನು ಒಂದೆಡೆ ಸೇರಿಸಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದೆ.

ರಕ್ತದೊತ್ತಡ, ಸಕ್ಕರೆ ಖಾಯಿಲೆ ಇತರೆ ಮಾನಸಿಕ ಖಾಯಿಲೆಗಳಿಗೆ ಬೇಗ ಗುಣಪಡಿಸಬಹುದಾದ ಚಿಕಿತ್ಸೆ ಕುರಿತು ಮಾಹಿತಿ ನೀಡುತ್ತಿದ್ದು ವೈದ್ಯರು ಇದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here