ಶಾಲಾ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು NSUI ರಾಜ್ಯ ಕಾರ್ಯದರ್ಶಿ ಹೆಚ್ ಎಸ್ ಬಾಲಾಜಿ ಆಗ್ರಹ

0
313

ಶಿವಮೊಗ್ಗ: ರಾಜ್ಯದ ಎಲ್ಲ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಉಚಿತ ಬಸ್ ಪಾಸ್ ನೀಡುವಂತೆ ಎನ್ ಎಸ್ ಯು ಐ ರಾಜ್ಯ ಕಾರ್ಯದರ್ಶಿ ಹೆಚ್ ಎಸ್ ಬಾಲಾಜಿ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ನೇತೃತ್ವದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೊನೆಯ ಬಜೆಟ್‌ನಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಯೋಜನೆ ಘೋಷಣೆ ಮಾಡಿದ್ದರು. ಆದರೆ ನಂತರದಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತಹ ಮಹತ್ತರ ಯೋಜನೆಯನ್ನು ಅನುಷ್ಠಾನ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಮಹತ್ತರವಾದ ಉಚಿತ ಬಸ್ ಪಾಸ್ ಯೋಜನೆಯನ್ನು ಬಿಜೆಪಿ ಸರ್ಕಾರ ಅನುಷ್ಠಾನಗೊಳಿಸಬೇಕು. ಎಲ್ಲ ವರ್ಗದ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಲಭ್ಯವಾಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಪ್ರದೇಶದ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳು ಆರ್ಥಿಕ ಹೊರೆಯ ಕಾರಣಕ್ಕಾಗಿ ಶಾಲಾ ಕಾಲೇಜು ಅಧ್ಯಯನ ಮುಂದುವರೆಸಲು ಸಾಧ್ಯವಾಗದೇ ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆ ಇದೆ. ಆದ್ದರಿಂದ ಆರ್ಥಿಕ ಹೊರೆಯ ಕಾರಣಕ್ಕೆ ಯಾವುದೇ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತರಾಗಬಾರದು ಎಂದು ತಿಳಿಸಿದ್ದಾರೆ.

ಶಾಲಾ ಕಾಲೇಜಿನ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಅನ್ನು ರಾಜ್ಯ ಸರ್ಕಾರ ನೀಡಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಘೋಷಣೆ ಮಾಡಿದ್ದ ಯೋಜನೆ ಅನುಷ್ಠಾನವನ್ನು ವಿಳಂಬ ಮಾಡಿದಲ್ಲಿ ಎನ್ ಎಸ್ ಯು ಐ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎನ್ ಎಸ್ ಯು ಐ ರಾಜ್ಯ ಕಾರ್ಯದರ್ಶಿ ಎಚ್ ಎಸ್ ಬಾಲಾಜಿ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here