ಶಾಸಕ ಎಂ.ಪಿ ಕುಮಾರಸ್ವಾಮಿ ಕಾರು ಡಿಕ್ಕಿ: ಮಹಿಳೆ ಸಾವು!

0
1066

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರಿನಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿ ಆಕೆ ಮಗನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.

ಬೇಲೂರಿನ ಹನುಮಂತ ನಗರದಲ್ಲಿ ಈ ಘಟನೆ ನಡೆದಿದ್ದು, ಬೇಲೂರಿನಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಕಾರನ್ನು ಚಾಲಕ ರಿಪೇರಿಗಾಗಿ ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೇಲೂರು ತಾಲೂಕಿನ ಹನುಮಂತ ನಗರದಲ್ಲಿ 55 ವರ್ಷದ ಹೂವಮ್ಮ ಹಾಗೂ ಅವರ ಮಗ ಬೈಕಿನಲ್ಲಿ ತೆರಳುತಿದ್ದ ವೇಳೆಯಲ್ಲಿ ಹಿಂಬದಿಯಿಂದ ಶಾಸಕರ ಕಾರು ಡಿಕ್ಕಿಯಾಗಿದೆ.

ಅಪಘಾತಕ್ಕೆ ಶಾಸಕರ ಕಾರು ಚಾಲಕ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದದ್ದು ಕಾರಣ ಎನ್ನಲಾಗಿದೆ. ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here