ಶಿಕಾರಿಪುರ: ಗೂಡ್ಸ್ ಆಟೋಗಳ ಮೂಲಕ ಪರೀಕ್ಷಾ ಕೇಂದ್ರಕ್ಕೆ ತೆರಳಿದ SSLC ವಿದ್ಯಾರ್ಥಿಗಳು !

0
305

ಶಿಕಾರಿಪುರ: ಖಾಸಗಿ ವಿದ್ಯಾಸಂಸ್ಥೆಗಳ ಪ್ರೌಢಶಾಲೆಗಳಿಂದ ಆಗಮಿಸಿದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನಾಲ್ಕು ಚಕ್ರದ ಆಟೋಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವ ಮೂಲಕ ಪರೀಕ್ಷೆ ಬರೆಯಲು ಸಹಾಯ ಮಾಡುವ ಪ್ರವೃತ್ತಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವವರಿಗೆ ಇದೊಂದು ದೊಡ್ಡ ವಿಪರ್ಯಾಸ ಅಂದ್ರೆ ತಪ್ಪಾಗಲಾರದು. ಇಂದಿನ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಲಗೇಜ್ ಕ್ಯಾರಿಯರ್ ಆಟೋಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾದ ಘಟನೆ ಇಂದು ನಡೆದಿದೆ.

ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಹಾಗೂ ಅವರ ಭವಿಷ್ಯಕ್ಕೆ ಉತ್ತಮ ಅಡಿಪಾಯ ಹಾಕುವ ಘಟ್ಟವೆಂದರೆ ಅದು ಎಸ್ಎಸ್ಎಲ್ಸಿ ಪರೀಕ್ಷೆ, ಕಳೆದೆರಡು ವರ್ಷಗಳಿಂದ ದೇಶದಾದ್ಯಂತ ಕೊರೊನಾ ಮಹಾಮಾರಿಯ ಭೀತಿಯಿಂದ ಶಿಕ್ಷಣ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ಆದರೀಗ ಕೊರೋನ ಎಂಬ ಭೂತದ ಭಯವು ಕಡಿಮೆಯಾದ ಹಿನ್ನೆಲೆಯಲ್ಲಿ ಸರ್ಕಾರದಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿ, ಸೋಮವಾರದಿಂದ ರಾಜ್ಯದ ಎಲ್ಲಾ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ.

ಎಸ್ಎಸ್ಎಲ್ಸಿ ಪರೀಕ್ಷೆಯು ವಿದ್ಯಾರ್ಥಿಗಳ ಉಜ್ವಲ ರೂಪಿಸುವ ಒಂದು ಘಟ್ಟವಾಗಿದ್ದರೆ, ಇತ್ತೀಚೆಗೆ ನ್ಯಾಯಾಲಯದ ಆದೇಶನ್ವಯ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಈ ಎಸ್ಎಸ್ಎಲ್ಸಿ ಪರೀಕ್ಷೆಯು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಒಂದೆಡೆ ಧರ್ಮ ನಿಷ್ಠೆ ಇನ್ನೊಂದೆಡೆ ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ತವಕ. ನ್ಯಾಯಾಲಯವು ಹಿಜಾಬ್ ಧರಿಸಿ ಶಾಲಾ ಕಾಲೇಜುಗಳ ತರಗತಿಯಲ್ಲಿ ಪ್ರವೇಶವಿಲ್ಲ ಎಂಬ ಆದೇಶವನ್ನು ಪಾಲಿಸಿ ಪರೀಕ್ಷೆ ಬರೆಯಬೇಕಿದೆ. ಅದೇ ರೀತಿಯಲ್ಲಿ ಶಿಕಾರಿಪುರ ತಾಲ್ಲೂಕಿನಲ್ಲಿಯೂ ಕೂಡ ಮುಸ್ಲಿಂ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಿಂದ ತಮ್ಮ ಧರ್ಮಕ್ಕೆ ಧಕ್ಕೆ ಬಾರದಂತೆ ಬುರ್ಖಾ ಹಾಗೂ ಹಿಜಾಬ್ ಧರಿಸಿ ಪರಿಕ್ಷಾ ಕೇಂದ್ರಗಳಿಗೆ ಆಗಮಿಸಿ, ಪರೀಕ್ಷಾ ಕೇಂದ್ರಗಳ ಕೊಠಡಿಯೊಳಗೆ ನ್ಯಾಯಾಲಯದ ಆದೇಶವನ್ನು ಪಾಲಿಸಿ ಪರೀಕ್ಷೆ ಬರೆಯಲು ಮುಂದಾದರು.

ಶಿಕಾರಿಪುರ ತಾಲ್ಲೂಕಿನಲ್ಲಿ ಒಟ್ಟು 73 ಪ್ರೌಢಶಾಲೆಯ 3375 ವಿದ್ಯಾರ್ಥಿಗಳು ಪ್ರಥಮವಾಗಿ ಮತ್ತು 72 ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲು, ಪಟ್ಟಣದ ಸ,ಪ,ಪೂ (ಗಂ) ಕಾಲೇಜು ಶಿಕಾರಿಪುರ, ಸ,ಪ,ಪೂ (ಹೆ) ಕಾಲೇಜು, ಬನಸಿರಿ ಲಯನ್ಸ್ ವಿದ್ಯಾಸಂಸ್ಥೆ ಶಿಕಾರಿಪುರ, ಸ,ಬಾ,ಪ,ಪೂ ಕಾಲೇಜು ಶಿರಾಳಕೊಪ್ಪ, ಶ್ರೀ ಅಲ್ಲಮಪ್ರಭು ಪ್ರೌಢಶಾಲೆ ಬಳ್ಳಿಗಾವಿ, ಕ,ಪ, ಸ್ಕೂಲ್ ಶಿರಾಳಕೊಪ್ಪ, ಶ್ರೀ ಶಿವಾನಂದ ಪ್ರೌಢಶಾಲೆ ಶಿವನಪಾದ, ಪ ಪೂ ಕಾಲೇಜು ಹೊಸೂರು, ಶ್ರೀ ಮಲ್ಲೇಶ್ವರ ಪ್ರೌಢಶಾಲೆ ಮಾರವಳ್ಳಿ, ಸರ್ಕಾರಿ ಪ್ರೌಢಶಾಲೆ ಗಾಮ, ಸರ್ಕಾರಿ ಪದವಿ ಪೂರ್ವ ಕಾಲೇಜು ಹಿತ್ತಲ ಹೀಗೆ ಒಟ್ಟು 11 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಈ 11 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ವಿವಿಧ ಖಾಸಗಿ ವಿದ್ಯಾಸಂಸ್ಥೆಗಳ ಪ್ರೌಢಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಪಟ್ಟಣ ಸೇರಿದಂತೆ ವಿವಿಧ ಭಾಗಗಳಲ್ಲಿ ಪರೀಕ್ಷೆ ಬರೆಯಲು ನಾಲ್ಕು ಚಕ್ರದ ಆಟೋಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಯಿತು.

ಖಾಸಗಿ ವಿದ್ಯಾಸಂಸ್ಥೆಗಳು ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವಿದೆ ಎಂದು ಡೊನೇಷನ್ ಪಡೆಯುವ ವೇಳೆ ಬಸ್ ಸೌಲಭ್ಯವಿದೆ ಎಂದು ಹೆಚ್ಚಿನ ರೀತಿಯಲ್ಲಿ ಹಣ ವಸೂಲಿ ಮಾಡುವ ಪ್ರವೃತ್ತಿ ಬೆಳೆದಿದೆ. ಅದೇ ರೀತಿಯಲ್ಲಿ ಪ್ರತಿನಿತ್ಯ ವರ್ಷವಿಡೀ ವಿದ್ಯಾರ್ಥಿಗಳಿಗೆ ವಿವಿಧ ಗ್ರಾಮಗಳಿಂದ ತಮ್ಮ ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಕರೆದುಕೊಂಡು ಬರುವ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕರೆದುಕೊಂಡು ಹೋಗುವ ಕೆಲಸ ಮಾಡುವವರು ಆದರೆ, ವಿದ್ಯಾರ್ಥಿಗಳ ಉಜ್ವಲ ರೂಪಿಸುವ ಹಾಗೂ ಅವರ ಭವಿಷ್ಯಕ್ಕೆ ಉತ್ತಮ ಅಡಿಪಾಯ ಹಾಕುವ ಎಸ್ಎಸ್ಎಲ್ಸಿ ಪರೀಕ್ಷೆಗೆ ನಾಲ್ಕು ಚಕ್ರದ ಆಟೋಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವ ಕಾರ್ಯ ಎಷ್ಟು ಸರಿ ಎಂಬ ಪ್ರಶ್ನೆ ಇಲ್ಲಿ ಮೂಡುವುದರಲ್ಲಿ ಅನುಮಾನವಿಲ್ಲ.

ಜಾಹಿರಾತು

LEAVE A REPLY

Please enter your comment!
Please enter your name here