ಶಿಕಾರಿಪುರ; ರ‍್ಯಾಂಕ್ ಪಡೆದು ತಾಲೂಕಿಗೆ ಕೀರ್ತಿ ತಂದ ಪ್ರತಿಭಾವಂತರು

0
305

ಶಿಕಾರಿಪುರ: 2020-21ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯದ ಬಿ.ಎಸ್.ಡಬ್ಲ್ಯೂ (ಸಮಾಜ ಕಾರ್ಯ) ಅಂತಿಮ ವರ್ಷದ ಪರೀಕ್ಷೆಯಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಸಿಂಧು ಆರ್.ಕೆ. ದ್ವಿತೀಯ ರ‍್ಯಾಂಕ್, ವಿನುತಾ ಆರ್.ಜಿ. ತೃತೀಯ ರ‍್ಯಾಂಕ್, ನಾಗರಾಜ್ ವಿ.ಇ. ನಾಲ್ಕನೇ ಗಳಿಸಿದರೆ ಕುಮಾರಿ ತೇಜಶ್ವರಿ ಎಸ್.ಕೆ. ಆರನೇ ರ‍್ಯಾಂಕ್ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಶೇಖರ್, ಬೋಧಕರುಗಳು, ಬೋಧಕೇತರರು, ವಿದ್ಯಾರ್ಥಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದಿಸಿರುತ್ತಾರೆ.

ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ಕೂಡಾ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿರುತ್ತಾರೆ.

ಜಾಹಿರಾತು

LEAVE A REPLY

Please enter your comment!
Please enter your name here