ಎನ್.ಆರ್.ಪುರ : ಶಾಲಾ ಶಿಕ್ಷಕನೋರ್ವ ಶಾಲೆಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದ್ದು, ಶಿಕ್ಷಕನ ವಿರುದ್ಧ ಪೊಲೀಸರು ಪೊಕ್ಸೊ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ನರಸಿಂಹರಾಜಪುರ ಪಟ್ಟಣದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಪ್ರಭುನಾಯಕ್ ಅದೇ ಶಾಲೆಯ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆ ಆರೋಪಿ ಶಿಕ್ಷಕ ನಾಪತ್ತೆಯಾಗಿದ್ದಾನೆಂದು ತಿಳಿದು ಬಂದಿದೆ.