20.6 C
Shimoga
Friday, December 9, 2022

ಶಿಕ್ಷಣ ಕ್ಷೇತ್ರದಲ್ಲೂ ಮೊಳಕೆಯೊಡೆದ ಭ್ರಷ್ಟಾಚಾರ ; ಲಂಚ ಸ್ವೀಕರಿಸಿ ಸಿಕ್ಕಿ ಬಿದ್ದ ಬಿಇಒ !

ಕಡೂರು : ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕೆ.ಎನ್‌.ಜಯಣ್ಣ ಅವರು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಮಂಗಳವಾರ ಸಿಕ್ಕಿಬಿದ್ದಿದ್ದಾರೆ.

ಲಿಂಗ್ಲಾಪುರ ಶಾಲೆಯಿಂದ ಬಿಡುಗಡೆಗೊಳಿಸಲು ರಾಜಪ್ಪ ಅವರಿಗೆ 15 ಸಾವಿರ ರೂ. ಲಂಚ ನೀಡುವಂತೆ ಜಯಣ್ಣ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಅದರಂತೆ ಇಂದು ಕಡೂರು ತಾಲೂಕಿನ ಜಿ.ತಿಮ್ಮಾಪುರ ಗೇಟ್ ಬಳಿ ಲಂಚ ಪಡೆಯುವಾಗ ಲೋಕಾಯುಕ್ತ ಡಿ.ವೈ.ಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಿದ ತಂಡ ಲಂಚದ ಹಣವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಸಹ ಶಿಕ್ಷಕ ಎನ್.ಎಸ್. ರಾಜಪ್ಪ ಅವರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಕಡೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಜಯಣ್ಣ ಬಲೆಗೆ ಬಿದ್ದಿದ್ದಾರೆ.

ಘಟನೆ ವಿವರ :

ಕಡೂರು ತಾಲೂಕಿನ ಹುಲೇಗೊಂದಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ರಾಜಪ್ಪ ಇವರನ್ನು ಜಿ.ತಿಮ್ಮಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆ ಮಾಡಲಾಗಿತ್ತು. 6 ತಿಂಗಳು ಅಲ್ಲಿ ಕೆಲಸ ಮಾಡಿದ ರಾಜಪ್ಪ ಅವರು ಸಿಂಗಟಗೆರೆ ಶಾಲೆಗೆ ಪುನಃ ನಿಯೋಜನೆ ಮಾಡಿದ್ದು, ಅವರು ಅಲ್ಲಿಗೆ ತೆರಳದೆ ಗೈರು ಹಾಜರಾಗಿದ್ದರು. ಪುನಃ ಲಿಂಗ್ಲಾಪುರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನಿಯೋಜನೆ ಮಾಡಿದ್ದು ಶಾಲೆಯಿಂದ ಶಾಲೆಗೆ ಬದಲಾವಣೆ ಆಗುತ್ತಿದ್ದ ಹಿನ್ನಲೆಯಲ್ಲಿ ಅವರು ಬೇಸತ್ತಿದ್ದರು ಎಂದು ಹೇಳಲಾಗಿದೆ.

ಬಿಇಒ ಜಯಣ್ಣ

ದಿಢೀರ್ ಘಟನೆಯಿಂದ ಶಿಕ್ಷಕವರ್ಗದಲ್ಲಿ ಈ ವಿಚಾರ ಕಾಡ್ಗಿಚ್ಚಿನಂತೆ ಹರಡಿದ್ದು, ಗಣಪತಿ ಪೆಂಡಾಲ್ ಆವರಣದಲ್ಲಿರುವ ಬಿಇಒ ಕಚೇರಿಯ ಬಳಿ ಶಿಕ್ಷಕರ ಗುಂಪು ಸೇರಿದ್ದರು. ಗುಂಪು ಗುಂಪಾಗಿ ಗುಸು-ಗುಸು ಮಾತನಾಡಿಕೊಳ್ಳುತ್ತಿದ್ದ ದೃಶ್ಯವು ಕಂಡುಬಂದಿತು. ದಾಳಿಯಲ್ಲಿ ಲೋಕಾಯುಕ್ತ ಸಿಬ್ಬಂದಿಯಾದ ಚೇತನ್, ಸಲೀಂ, ಲೋಕೇಶ್, ವಿಜಯಭಾಸ್ಕರ್, ಸವಿನಯ, ರವಿಚಂದ್ರ ಇದ್ದರು.

ಶಿಕ್ಷಣ ಕ್ಷೇತ್ರ ದೇಶದ ಮುಂದಿನ ಪ್ರಜೆಗಳನ್ನು ರೂಪುಗೊಳಿಸುವ ಕಳಂಕರಹಿತ ವಿವಾದದಿಂದ ದೂರ ಇರಬೇಕಾದ ಕ್ಷೇತ್ರ. ಇನ್ನು ಶಿಕ್ಷಕರು ಹಾಗೂ ಶಿಕ್ಷಣಾಧಿಕಾರಿಗಳು ಮಕ್ಕಳ ಮುಂದೆ ಮಾದರಿಯಾಗಿರಬೇಕಾದಂತವರು. ಏಕೆಂದರೆ ಮಕ್ಕಳು ತಪ್ಪು ಸರಿಗಳನ್ನು ತಿದ್ದಿ ತೀಡಿ ಬುದ್ದಿ ಹೇಳಬೇಕಾದವರು ಶಿಕ್ಷಕರು. ಇಂತಹ ಶಿಕ್ಷಣ ಕ್ಷೇತ್ರದಲ್ಲೇ ಶಿಕ್ಷಣಾಧಿಕಾರಿಯೊಬ್ಬರು ಲಂಚ ಸ್ವೀಕರಿಸಿ ಸಿಕ್ಕಿ ಬಿದ್ದಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!