ಶಿವಪುರದ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜರುಗಿದ ವಾರ್ಷಿಕ ಪ್ರತಿಷ್ಟಾ ಮಹೋತ್ಸವ

0
302

ರಿಪ್ಪನ್‌ಪೇಟೆ: ಇಲ್ಲಿನ ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿವಪುರ ಶ್ರೀ ಸುಬ್ರಹ್ಮಣ ಸ್ವಾಮಿಯ ದೇವಸ್ಥಾನದ ವಾರ್ಷೀಕ ಪ್ರತಿಷ್ಠಾಪನಾ ಮಹೋತ್ಸವ ಮತ್ತು ಇತರ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಅದ್ಧೂರಿಯಾಗಿ ಜರುಗಿತು.

ಕೆಂಜಿಗಾಪುರದ ವಿದ್ವಾನ್ ಶ್ರೀಧರಭಟ್ ಮತ್ತು ಪುರೋಹಿತ ಬಳಗದವರಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜಾ ಕಾರ್ಯಗಳೊಂದಿಗೆ ಹೋಮ ಹವನಗಳು ಇನ್ನಿತರ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು.

ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಪೂಜಾ ಕಾರ್ಯದಲ್ಲಿ ಶ್ರದ್ದಾಭಕ್ತಿಯಿಂದ ಭಾಗವಹಿಸಿ ದೇವರ ದರ್ಶನಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನ ಧರ್ಮದರ್ಶಿಗಳು ಸೇವಾ ಸಮಿತಿಯವರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದರು. ನಂತರ ಸುಬ್ರಹ್ಮಣ್ಯ ಸ್ವಾಮಿಯ ರಥೋತ್ಸವವು ಸಂಭ್ರಮ ಸಡಗರದೊಂದಿಗೆ ನೇರವೇರಿತು.

ಜಾಹಿರಾತು

LEAVE A REPLY

Please enter your comment!
Please enter your name here