ಶಿವಮೊಗ್ಗದಲ್ಲಿ ಸೋಮವಾರದವರೆಗೆ ನಿಷೇಧಾಜ್ಞೆ ಮುಂದುವರಿಕೆ !

0
648

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಪರಿಸ್ಥಿತಿ ನಿಯಂತ್ರಿಸೋದಕ್ಕಾಗಿ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ನಿಷೇಧಾಜ್ಞೆಯನ್ನು ಫೆಬ್ರವರಿ 28ರವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಂಬಂಧ 144 ಸೆಕ್ಷನ್ ಅಡಿಯಲ್ಲಿ ಜಾರಿಗೊಳಿಸಿರುವಂತ ನಿಷೇಧಾಜ್ಞೆಯನ್ನು ಫೆಬ್ರವರಿ 28ರ ಸೋಮವಾರ ಬೆಳಿಗ್ಗೆ 9 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ನಿಷೇಧಾಜ್ಞೆಯ ನಡುವೆಯೂ ಸಾರ್ವಜನಿಕರು ಅಗತ್ಯ. ವಸ್ತುಗಳನ್ನು ಖರೀದಿಸೋದಕ್ಕೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕರ್ಫ್ಯೂ ಸಡಿಲ ಮಾಡಲಾಗಿದೆ. ಆದರೆ ನಿಷೇಧಾಜ್ಞೆಯ ಸಮಯದಲ್ಲಿ ಹೆಚ್ಚು ಜನರು ಗುಂಪು ಸೇರುವಂತಿಲ್ಲ ಎಂಬುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here