ಶಿವಮೊಗ್ಗದ ಗಾಂಧಿ ಬಜಾರ್’ನಲ್ಲಿ ಯುವಕನಿಗೆ ಚಾಕು ಇರಿತ !

0
1015

ಶಿವಮೊಗ್ಗ: ಯುವಕನೋರ್ವನಿಗೆ ಚಾಕು ಇರಿದ ಘಟನೆ ನಗರದ ಗಾಂಧಿ ಬಜಾರ್ ನಲ್ಲಿ ನಡೆದಿದೆ.

ಗಾಂಧಿ ಬಜಾರ್ ನಲ್ಲಿದ್ದ‌‌ ಉಪ್ಪಾರ ಕೇರಿ ವಾಸಿ ಪ್ರೇಮ್ ಸಿಂಗ್ (20) ಎಂಬ ಯುವಕನಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಚಾಕು ಇರಿತಕ್ಕೊಳಗಾದ ಯುವಕನನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸಾವರ್ಕರ್ ಫೋಟೋ ಇರುವ ಬ್ಯಾನರ್ ತೆರವುಗೊಳಿಸಿರುವ ವಿಚಾರಕ್ಕೆ ನಡೆದ ಗಲಾಟೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಳೆವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here