ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

0
908

ಶಿವಮೊಗ್ಗ/ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆ. 21ರವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ, ಮಲೆನಾಡು, ಕೊಡಗು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದು ಮಳೆ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಚಿಕ್ಕಮಗಳೂರು,ಹಾಸನ, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಾಹಿರಾತು

LEAVE A REPLY

Please enter your comment!
Please enter your name here