ಶಿವಮೊಗ್ಗ: ಜಿಲ್ಲಾ ರಕ್ಷಣಾಧಿಕಾರಿಯಾಗಿ ಯುವ ಅಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಗುರುವಾರ ಆದೇಶಿಸಿದೆ.
ಇಲ್ಲಿನ ಹಾಲಿ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರನ್ನು ಬೆಂಗಳೂರಿನ ಪೂರ್ವ ಸಂಚಾರ ವಿಭಾಗದ ಡೆಪ್ಯೂಟಿ ಕಮಿಷನರ್ ಸ್ಥಾನಕ್ಕೆ ವರ್ಗಾವಣೆಗೊಂಡಿದ್ದಾರೆ.
ಇವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಎಂ. ಲಕ್ಷ್ಮೀ ಪ್ರಸಾದ್ ಶಿವಮೊಗ್ಗಕ್ಕೆ ವರ್ಗಾವಣೆಗೊಂಡಿದ್ದಾರೆ.

2014 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಲಕ್ಷ್ಮೀ ಪ್ರಸಾದ್ ಬಿ ಟೆಕ್ ಪದವೀಧರರಾಗಿದ್ದಾರೆ. ಯುಪಿಎಸ್ ಸಿ ಯಲ್ಲಿ 2014 ರಲ್ಲಿ ನಡೆದ ಯುಪಿಎಸ್ ಸಿಯಲ್ಲಿ 151 ನೇ ರ್ಯಾಂಕ್ ಪಡೆದಿದ್ದರು.
ಇವರು ವಿಜಯಪುರದಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಕಾರ್ಕಳದ ನಕ್ಸಲ್ ನಿಗ್ರಹದಳದ ಎಸ್ಪಿ ಆಗಿ ಕೆಲಸ ನಿರ್ವಹಿಸಿದ್ದಾರೆ. ನಂತರ ಬೆಂಗಳೂರಿನ ಇಂಟರ್ನಲ್ ಸೆಕ್ಯೂರಿಟಿಯ ಎಸ್ಪಿ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.
