ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ಗೆ ಕಾರ್ಯದರ್ಶಿಗಳ ನೇಮಕ

0
224

ಹೊಸನಗರ: ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಹೆಚ್ಚು ಗುರುತಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿರುವ ಯುವ ನಾಯಕರಿಗೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಲ್ಲಿ ಉತ್ತಮ ಹುದ್ದೆ ನೀಡುವಂತೆ ಹೊಸನಗರ ಯುವ ಕಾಂಗ್ರೆಸ್ ಸಮಿತಿಯಿಂದ ಶಿಫಾರಸು ಮಾಡಲಾಗಿತ್ತು.

ಅದರ ಆಧಾರದ ಮೇಲೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಗಳನ್ನಾಗಿ ಉಲ್ಲಾಸ್ ಆರ್ ಹಾಗೂ ಗುರುಮೂರ್ತಿ ಎಂ.ಕೆ ಇವರನ್ನು ಆಯ್ಕೆ ಮಾಡಲಾಗಿದೆ.

ಇಂದು ನಮ್ಮ ಪಕ್ಷದಲ್ಲಿ ನಿಷ್ಟಾವಂತರಾಗಿ ಕೆಲಸ ಮಾಡುವ ಯುವಕರಿಗೆ ಈ ಹುದ್ದೆ ನೀಡಿರುವುದು ಸಂತೋಷವಾಗಿದೆ ಎಂದು ಹೊಸನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿರುವ ರಾಷ್ಟ್ರೀಯ ನಾಯಕರುಗಳಿಗೂ ಹಾಗೂ ರಾಜ್ಯ ನಾಯಕರುಗಳಿಗೆ ಧನ್ಯವಾದಗಳನ್ನ ನೂತನ ಕಾರ್ಯದರ್ಶಿಗಳು ಈ ಮೂಲಕ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here