ಶಿವಮೊಗ್ಗ ಜಿಲ್ಲೆಯಲ್ಲಿಂದು ಬರೋಬ್ಬರಿ 319 ಮಂದಿಗೆ ತಗುಲಿದ ಕೊರೊನಾ ಸೋಂಕು ! ಎಚ್ಚರ… ಎಚ್ಚರ…

0
640

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರುತ್ತಿದ್ದು, ಇಂದು ಜಿಲ್ಲೆಯಲ್ಲಿ ಬರೋಬ್ಬರಿ 319 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 979 ಕ್ಕೇರಿದ್ದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ.

ತಾಲೂಕುವಾರು ಇಂದಿನ ಸೋಂಕಿತರ ವಿವರ :

ಶಿವಮೊಗ್ಗ 171

ಭದ್ರಾವತಿ 59

ತೀರ್ಥಹಳ್ಳಿ 19

ಶಿಕಾರಿಪುರ 13

ಸಾಗರ 37

ಹೊಸನಗರ 08

ಸೊರಬ 08

ಇತರೆ ಜಿಲ್ಲೆ 04

ಇಂದು 2211 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2558 ಜನರಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿದೆ. 87 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. 74 ಜನರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ 144 ಮಂದಿ, 639 ಜನರು ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ. 35 ಮಂದಿ ಟ್ರಿಯಾಜ್ ಸೆಂಟರ್‌ಗಳಲಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 1072 ಜನರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here