ಶಿವಮೊಗ್ಗ : ಜಿಲ್ಲೆಯಲ್ಲಿಂದು ಬರೋಬ್ಬರಿ 870 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, 365 ಜನರು ಗುಣಮುಖರಾಗಿದ್ದಾರೆ. ಇಂದು ಸಹ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಸೋಂಕಿತರ ಪೈಕಿ ಶಿವಮೊಗ್ಗ ತಾಲ್ಲೂಕಿನ 359 ಮಂದಿಗೆ ಸೋಂಕು ದೃಢಪಟ್ಟಿದ್ದು, ಭದ್ರಾವತಿಯ 161, ತೀರ್ಥಹಳ್ಳಿಯ 45, ಶಿಕಾರಿಪುರದ 46, ಸಾಗರದ 118, ಹೊಸನಗರದ 99, ಸೊರಬದ 28 ಹಾಗೂ ಹೊರ ಜಿಲ್ಲೆಯಿಂದ ಬಂದ 14 ಮಂದಿಗೆ ಸೋಂಕು ತಗುಲಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 2805ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 58 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 09 ಸೋಂಕಿತರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸಿಎಚ್ಸಿಯಲ್ಲಿ 27, ಹೋಂ ಐಸೊಲೇಷನ್ನಲ್ಲಿ 2653, ಟ್ರಯೇಜ್ನಲ್ಲಿ 58 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Related
You cannot copy content of this page