ಶಿವಮೊಗ್ಗ: ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ !

0
529

ಶಿವಮೊಗ್ಗ: ವಿಧಾನಪರಿಷತ್ ಚುನಾವಣೆ ರಂಗೇರುತ್ತಿದ್ದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವಲ್ಲಿ ಮೂರು ಪಕ್ಷಗಳು ಸರ್ಕಸ್ ನಡೆಸುತ್ತಿದ್ದರೆ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಪ್ರಸನ್ನಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಆಗುವ ಮುನ್ನವೇ ಪಕ್ಷದಿಂದ ಬಿ ಫಾರಂ ಪಡೆಯದೇ ಇಂದು ಮಧ್ಯಾಹ್ನ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಪಕ್ಷದಿಂದ ಬಿ ಫಾರಂ ಪಡೆಯದೇ ಇಂದು ಮಧ್ಯಾಹ್ನ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ನಿಂದ ಆರ್. ಪ್ರಸನ್ನ ಕುಮಾರ್, ವೈ.ಹೆಚ್. ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದರು‌. ಇದೀಗ ಶಿವಮೊಗ್ಗ ಜಿಲ್ಲೆಯ ಒಂದು ಸ್ಥಾನಕ್ಕೆ ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಇದ್ದರು.

ಇದಕ್ಕೂ ಮೊದಲು ರಾಮಣಶ್ರೇಷ್ಟಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.

ಜಾಹಿರಾತು

LEAVE A REPLY

Please enter your comment!
Please enter your name here