ರಿಪ್ಪನ್ಪೇಟೆ: ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪುರವರ ಹೆಸರು ನಾಮಕರಣ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ರಾಜ್ಯ ಜೆಡಿಎಸ್ ಮುಖಂಡ ಆರ್.ಎ.ಚಾಬುಸಾಬ್ ಮತ್ತು ಆರ್.ಎನ್.ಮಂಜುನಾಥ್ ಒತ್ತಾಯಿಸಿದ್ದಾರೆ.
ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದಕೊಟ್ಟ ಹಾಗೂ ಪಂಪ ಪ್ರಶಸ್ತಿಕೃತ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಜನಿಸಿದ ಇವರು ಮೈಸೂರು ವಿಶ್ವ ವಿದ್ಯಾಲಯದಲ್ಲಿ ಉಪಕುಲಪತಿಗಳಾದವರು. ಇವರ ಕರ್ನಾಟಕದ ಘನತೆ ಗೌರವವನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದು ಕನ್ನಡ ಸಾರಸ್ವತ ಲೋಕಕ್ಕೆ ಸಲ್ಲಿಸಿದ ಸೇವೆ ಅದ್ವೀತಿಯ ಹಾಗೂ ಅನನ್ಯವಾಗಿ ಆದ್ದರಿಂದ ರಾಷ್ಟ್ರಕವಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಹೆಸರು ವಿಮಾನ ನಿಲ್ದಾಣಕ್ಕೆ ಸೂಕ್ತವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ರಾಜ್ಯಪಾಲರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಕಳುಹಿಸುತ್ತಿರುವುದಾಗಿ ವಿವರಿಸಿದರು.
ಜೆಡಿಎಸ್ ಮುಖಂಡರಾದ ಜಿ.ಎಸ್.ವರದರಾಜ್, ಎನ್.ವರ್ತೇಶ್, ಮುಡುಬ ಧರ್ಮಪ್ಪ ಇನ್ನಿತರರು ಹಾಜರಿದ್ದರು.
Related