ಸೊರಬ: ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ತುಡ್ನೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಶಂಶಾದ್ ಬಾನು ಬಾಷಾ ಸಾಬ್ (45) ಮೃತ ದುರ್ದೈವಿ. ಶುಂಠಿ ಕಣದಲ್ಲಿ ಕೆಲಸ ಮಾಡುವ ವೇಳೆಯಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಆನವಟ್ಟಿ ಪಿಎಸ್ಐ ಪ್ರವೀಣ್ ಕುಮಾರ್ ವಾಲೀಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮುಹಮ್ಮದ್ ಆರೀಫ್ ಸೊರಬ
Related