ಶುಕ್ರವಾರ ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ | ನಾಳೆಯಿಂದ ಶಾರದಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧ

0
1013

ಚಿಕ್ಕಮಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಕ್ಟೋಬರ್ 8ರ ಶುಕ್ರವಾರ ಶೃಂಗೇರಿಯ ಶಾರದಾಂಬೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಗಳ ಭೇಟಿ ಹಿನ್ನಲೆಯಲ್ಲಿ ಶೃಂಗೇರಿಯಲ್ಲಿ ಸಕಲ ರೀತಿಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ.

ಗುರುವಾರ ಮತ್ತು ಶುಕ್ರವಾರದಂದು ಶೃಂಗೇರಿ ಮಠ ಹಾಗೂ ಶಾರದಾಂಬೆ ದರ್ಶನಕ್ಕೆ ಸಾರ್ವಜನಿಕ ಮತ್ತು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ರಾಷ್ಟ್ರಪತಿ ಭೇಟಿ ಹಿನ್ನೆಲೆ ದೇವಾಲಯಕ್ಕೆ ವಿಶೇಷ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಶುಕ್ರವಾರದಂದು ಮುಖ್ಯ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಮೆಣಸೆ ಬಳಿಯ ಹಳೆಯ ತಾತ್ಕಾಲಿಕ ಹೆಲಿಪ್ಯಾಡನ್ನು ದುರಸ್ತಿಪಡಿಸುವ ಬದಲಾಗಿ ಗಾಂಧಿ ಮೈದಾನದಲ್ಲಿ ತಾತ್ಕಾಲಿಕ ಹೆಲಿಪ್ಯಾಡನ್ನು ನಿರ್ಮಿಸಲಾಗಿದ್ದು, ಗಾಂಧಿ ಮೈದಾನದಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಎತ್ತಂಗಡಿ ಮಾಡಲಾಗಿದ್ದು ಇಲ್ಲಿ ಅನೇಕ ಮರಗಳನ್ನೂ ಕಡಿಯಲಾಗಿದೆ.

ಇತ್ತೀಚೆಗಷ್ಟೇ ಪಟ್ಟಣ ಪಂಚಾಯಿತಿ ವತಿಯಿಂದ ಹಾಕಿದ್ದ ವಿದ್ಯುತ್ ಕಂಬವನ್ನು ತೆರವುಗೊಳಿಸಲಾಗಿದ್ದು, ಶೃಂಗೇರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ತಿರುಗಾಡುತ್ತಿದ್ದ ಬೀದಿನಾಯಿಗಳನ್ನು ಹೊರವಲಯಕ್ಕೆ ಸ್ಥಳಾಂತರಿಸಲಾಗಿದೆ.

ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಲಾಗಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಭದ್ರತಾ ನೆಪದಲ್ಲಿ ಕಿರಿಕಿರಿ ಅನುಭವಿಸಬೇಕಾಗಿದೆ.

ನಾಳೆಯಿಂದಲೇ ಶೃಂಗೇರಿ ಪಟ್ಟಣ ಪೊಲೀಸ್ ಸುಪರ್ದಿಗೆ ಒಳಪಡಲಿದ್ದು ರಾಷ್ಟ್ರಪತಿಗಳ ಭೇಟಿ ಸಂದರ್ಭದಲ್ಲಿ ಯಾವುದೇ ವ್ಯತ್ಯಾಸಗಳು ಉಂಟಾಗದಂತೆ ಎಚ್ಚರವಹಿಸಲು ಜಿಲ್ಲಾಡಳಿತ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಶೃಂಗೇರಿಯಲ್ಲಿ ಕರ್ತವ್ಯಕೆ ನಿಯೋಜಿಸಿದೆ ಎಂಬ ಮಾಹಿತಿಯನ್ನು ಸ್ಥಳೀಯ ಅಧಿಕಾರಿಯೊಬ್ಬರು ‘ಮಲ್ನಾಡ್ ಟೈಮ್ಸ್’ಗೆ ಮಾಹಿತಿ ನೀಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here