ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮನುಷ್ಯನಲ್ಲಿರುವ ದುಶ್ಚಟಗಳನ್ನು ಮುಕ್ತಗೊಳಿಸುವುದೇ ಮುಖ್ಯ ಉದ್ದೇಶ: ಬೇಬಿ ಕೆ

0
398

ಹೊಸನಗರ: ಮನುಷ್ಯರಲ್ಲಿರುವ ದುಶ್ಚಟಗಳಿಂದ ಮುಕ್ತಗೊಳಿಸುವ ಉದ್ಧೇಶವೇ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಮುಖ್ಯ ಉದ್ದೇಶವಾಗಿದೆ ಎಂದು ಹೊಸನಗರ ತಾಲ್ಲೂಕು ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬೇಬಿ ಕೆಯವರು ಹೇಳಿದರು.

ತಾಲ್ಲೂಕಿನ ಮತ್ತಿಮನೆ ಗ್ರಾಮದಲ್ಲಿ ನವಜೀವನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದುಶ್ಚಟ ಮುಕ್ತ ಸಮಾಜವೊಂದನ್ನು ನಿರ್ಮಿಸುವ ನಿಟ್ಟಿನಲ್ಲಿ ಪೂಜ್ಯ ವೀರೇಂದ್ರ ಹೆಗಡೆಯವರು ಕೈಗೊಂಡಿರುವ ಬಹುಮುಖ್ಯ ಕಾರ್ಯಕ್ರಮ ಜನಜಾಗೃತಿಯ ಮುಖೇನ ಸಮಾಜದಲ್ಲಿ ಮುಖ್ಯವಾಗಿ ದುರ್ಬಲ ವರ್ಗದವರಿಗೆ ದುಶ್ಚಟಗಳಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸಲಾಗಿದ್ದು ಇದಕ್ಕಾಗಿ ಸಮಾಜದ ಗಣ್ಯರ ಸಹಭಾಗಿತ್ವವುಳ್ಳ ರಾಜ್ಯ ಮಟ್ಟದಲ್ಲಿ ಜನಜಾಗೃತಿ ವೇದಿಕೆಯನ್ನು ಸ್ಥಾಪಿಸಲಾಗಿದೆ. ಶಾಲೆ – ಕಾಲೇಜ್‌ಗಳಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳು ವ್ಯಾಸನ ಮುಕ್ತ ಬದುಕಿಗಾಗಿ ಸ್ವಾಸ್ಥ್ಯ ಸಂಕಲ್ಪ ಎಂಬ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಗ್ರಾಮ ಗ್ರಾಮಗಳಲ್ಲಿ ಮದ್ಯ ವಿರೋಧಿ ಜಾಥಗಳನ್ನು ಏರ್ಪಡಿಸಲಾಗುತ್ತಿದೆ. ವಿಶೇಷವಾಗಿ ಮದ್ಯ ವ್ಯಸನಿಗಳಿಗೆ ಚಿಕಿತ್ಸೆಗಾಗಿ ಸಮುದಾಯ ಮಟ್ಟದಲ್ಲಿ ಮದ್ಯವರ್ಜನ ಶಿಬಿರಗಳನ್ನು ಕೈಗೊಳ್ಳಲಾಗುತ್ತಿದೆ ಇದುವರೆಗೆ 1471 ಮದ್ಯವರ್ಜನ ಶಿಬಿರಗಳನ್ನು ನಡೆಸಲಾಗಿದ್ದು 1,02110 ವ್ಯಾಸನಿಗಳು ಮದ್ಯವನ್ನು ವರ್ಜಿಸಿ ಸಂತೃಪ್ತಿ ಕೌಟಂಬಿಕ ಜೀವನವನ್ನು ನಡೆಸುತ್ತಿದ್ದಾರೆ ಅದೇ ನಿಟ್ಟಿನಲ್ಲಿ ಸಂಪೂರ್ಣ ದೇಶವು ವ್ಯಸನ ಮುಕ್ತವಾಗುವಲ್ಲಿ ನೀವೆಲ್ಲರೂ ಕೈ ಜೋಡಿಸಬೇಕೆಂದು ಕೇಳಿಕೊಂಡರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೆಶಕರಾದ ವಿವೇಕ್ ವಿ ಪಾಯಸ್‌ರವರು ಮಾತನಾಡಿ, ಈ ದೇಶವನ್ನು ವ್ಯಸನಿ ಮುಕ್ತ ಮಾಡುವುದೇ ನಮ್ಮ ಗುರಿಯಾಗಿದ್ದು ನಿಮ್ಮೆಲ್ಲರ ಸಹಕಾರ ಅತ್ಯಗತ್ಯವೆಂದರು.

ಕಾರ್ಯಕ್ರಮದಲ್ಲಿ ವಕೀಲರಾದ ಮೋಹನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಪುರುಷೋತ್ತಮ್, ಗ್ರಾಮ ಪಂಚಾಯಿತಿ ಸದಸ್ಯರಾದ ಡಿ.ಕೆ ಕೃಷ್ಣಮೂರ್ತಿ, ಒಕ್ಕೂಟದ ಅಧ್ಯಕ್ಷರಾದ ಚಿನ್ನಪ್ಪ, ಆರೋಗ್ಯ ಸಹಾಯಕಿ ಸೌಮ್ಯ ವಲಯದ ಮೇಲ್ವಿಚಾರಕಿಯಾದ ಅಶೋಕ್, ರೇಖಾ, ಸ್ಥಳಿಯ ಸೇವ ಪ್ರತಿನಿಧಿಗಳಾದ ನವಜೀವನ ಸಮಿತಿಯ ಸದಸ್ಯರು ಪೋಷಕರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here