ಶ್ರೀ ಧರ್ಮಸ್ಥಳ ಯೋಜನಾಧಿಕಾರಿಗಳ ಮಾರ್ಗದರ್ಶನದಲ್ಲಿ ಸೇವಾ ಕೇಂದ್ರ ತೆರೆಯುವುದರಿಂದ ಸಾಮಾನ್ಯ ಜನರಿಗೆ ಅನುಕೂಲ: ಎನ್.ಆರ್.ದೇವಾನಂದ್

0
300

ಹೊಸನಗರ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಡಿ. ವೀರೇಂದ್ರ ಹೆಗಡೆಯವರ ನೇತೃತ್ವದಲ್ಲಿ ಸೇವಾ ಕೇಂದ್ರಗಳನ್ನು ತೆರೆಯುತ್ತಿರುವುದರಿಂದ ಸಾಮಾನ್ಯ ಜನರಿಗೆ ಅನುಕೂಲವಾಗಲಿದೆ ಎಂದು ಅಂಬೇಡ್ಕರ್ ನಿಗಮದ ನಿರ್ದೆಶಕರಾದ ಎನ್.ಆರ್ ದೇವಾನಂದ್‌ರವರು ಹೇಳಿದರು.

ಹೊಸನಗರದ ಧರ್ಮಸ್ಥಳ ಗ್ರಾಮೀಣಾಬಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಯೋಜನಾಧಿಕಾರಿಗಳ ಕಛೇರಿಯಲ್ಲಿ ಸಾಮಾನ್ಯ ಸೇವಾ ಕೇಂದ್ರವನ್ನು ತೆರೆಯಲಾಗಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬೇಬಿ ಕೆ.ಯವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು ಪಡೆಯಲು ಅರ್ಜಿ ಸಲ್ಲಿಸಲು ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ಸಾಮಾನ್ಯ ಸೇವಾ ಕೇಂದ್ರಗಳನ್ನು ದೇಶದ್ಯಾಂತ ಸ್ಥಾಪಿಸುತ್ತಿದೆ. ಈ ಕೇಂದ್ರಗಳಲ್ಲಿ ಯಾರೇ ಆದರೂ ತಮಗೆ ಬೇಕಾದ ದಾಖಲಾತಿಗಳನ್ನು ಆಧಾರ್ ಕಾರ್ಡ್‌ನಿಂದ ಹಿಡಿದು ಆಯುಷ್ಮಾನ್ ಕಾರ್ಡ್‌ಗಳ ವರೆಗೆ ಒಟ್ಟು 700 ಸೇವೆಗಳು ಮಾಡಿಸಿಕೊಳ್ಳುವ ಅವಕಾಶ ಇರುತ್ತದೆ. ಕರ್ನಾಟಕ ರಾಜ್ಯದಲ್ಲಿ ಈ ಕಾರ್ಯಕ್ರಮವು ಸೇವಾಸಿಂಧು ಎಂಬ ಹೆಸರಿನಲ್ಲಿ ಜಾರಿಯಲ್ಲಿದ್ದು ರಾಜ್ಯದಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕೆಂಬ ಅಭಿಪ್ರಾಯ ಪೂಜ್ಯಾ ಡಾ|| ಡಿ. ವೀರೇಂದ್ರ ಹೆಗಡೆಯವರದ್ದಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಸಂಬಂಧಪಟ್ಟ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವರ್ಷದಲ್ಲಿ ಧರ್ಮಸ್ಥಳ ಯೋಜನೆಯ ವತಿಯಿಂದ 1ಸಾವಿರ ಸೇವಾ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದ್ದು ಜನಪರ ಕಾರ್ಯಕ್ರಮಗಳು ಸಾಮಾನ್ಯ ಜನರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ನೇರವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಮ್ಯಾನೆಂಜರ್ ಸುಧೀರ್, ಅಸಿಸ್ಟೆಂಟ್ ಮ್ಯಾನೇಜರ್ ಗುರುಪ್ರಸಾದ್, ಸುನೀತಾ, ರಶ್ಮಿ, ಆಶಿರ್ವಾದ್, ಚೇತನ, ಅಜಿತ್, ರಕ್ಷಿತಾ, ಹರ್ಷ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here