ಸಕಲ ಜೀವಾವಳಿಯ ನೆಮ್ಮದಿಯ ಬದುಕಿಗಾಗಿ ಕೆರೆ-ಕಟ್ಟೆಗಳನ್ನು ಕಟ್ಟಿಸಿ ಶಿವಯೋಗಿ ಸಿದ್ಧರಾಮೇಶ್ವರರು ‘ಕರ್ಮಯೋಗಿ’ ಎನಿಸಿಕೊಂಡರು ; ರಾಕೇಶ್

0
165

ಹೊಸನಗರ: 12ನೇ ಶತಮಾನದ ಪ್ರಪ್ರಥಮ ಶ್ರೇಣಿಯ ವಚನಕಾರರಲ್ಲಿ ಒಬ್ಬ ಚರಿತ್ರೆಗೆ ಸಂಬಂಧಿಸಿದ ಅನೇಕ ಆಧಾರಗಳು ವಚನ ಕಾವ್ಯ ಶಾಸನಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿದೆ. ಸಕಲ ಜೀವಾವಳಿಯ ನೆಮ್ಮದಿಯ ಬದುಕಿನಲ್ಲಿ ಕೆರೆ ಕಟ್ಟೆಗಳನ್ನು ಕಟ್ಟಿಸಿ ಕಾಯಕದಲ್ಲಿ ತೊಡಗಿ ಶಿವಯೋಗಿ ಸಿದ್ಧರಾಮೇಶ್ವರರು ಕರ್ಮಯೋಗಿ ಎನಿಸಿಕೊಂಡರು ಎಂದು ಹೊಸನಗರದ ತಾಲ್ಲೂಕು ಕಛೆರಿಯ ಗ್ರೇಡ್2 ತಹಶೀಲ್ದಾರ್ ರಾಕೇಶ್‌ರವರು ಹೇಳಿದರು.

ತಾಲ್ಲೂಕು ಕಛೇರಿಯ ಆವರಣದಲ್ಲಿ ಕೋವಿಡ್ ಮಾರ್ಗಸೂಚಿಯ ಅನುಗುಣವಾಗಿ ಸರಳ ರೀತಿಯಲ್ಲಿ ಶಿವಯೋಗಿ ಸಿದ್ಧರಾಮೇಶ್ವರರವರ ದಿನಾಚರಣೆಯನ್ನು ಆಚರಿಸಲಾಗಿದ್ದು ಇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ಬಾಲ್ಯದಲ್ಲಿ ಪ್ರಸಿದ್ಧನಾಗಿ ಮುಗ್ದಭಕ್ತನಾಗಿದ್ದು ದನ ಕಾಯುವ ಕಾಯುಕ ವೃತ್ತಿ ಮಾಡುತ್ತಿದ್ದು ಶ್ರೀ ಶೈಲಕ್ಕೆ ಹೋಗಿ ಮಲ್ಲಿಕಾರ್ಜುನರ ದರ್ಶನ ಪಡೆದ ಇವರು ಸೊನ್ನಲಿಗೆಗೆ ಬಂದು ದೇವಾಲಯ ಸ್ಥಾಪಿಸಿ ಆ ಆವರಣಕ್ಕೆ ಯೋಗ ರಮಣೀಯ ಕ್ಷೇತ್ರವೆಂದು ಹೆಸರನ್ನು ನಾಮಕರಣ ಮಾಡಿದರು ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಕಛೇರಿಯ ಪ್ರಥಮ ದರ್ಜೆ ಗುಮಾಸ್ಥರಾದ ವಿನಯ್ ಎಂ ಆರಾಧ್ಯ, ಶಿವಪ್ಪ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here