ಶಿವಮೊಗ್ಗ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ.
ನಾಳೆ ಸಂಜೆ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಕೊಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ನಾಳೆ ಸಂಜೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಭೇಟಿ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವೆ. ಈ ಪ್ರಕರಣದಲ್ಲಿ ಒಂದು ಪರ್ಸೆಂಟ್ ತಪ್ಪಿದ್ದರೂ ಮನೆ ದೇವರಾದ ಚೌಡೇಶ್ವರಿ ತಾಯಿ ನನಗೆ ಶಿಕ್ಷೆ ಕೊಡಲಿ ಎಂದು ತಿಳಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಇದರ ಬೆನ್ನಲ್ಲೆ ಸಚಿವ ಈಶ್ವರಪ್ಪ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ತುರ್ತು ಪತ್ರಿಕಾಗೋಷ್ಠಿ ಕರೆದ ಕೆ.ಎಸ್.ಈಶ್ವರಪ್ಪ ಅವರು, ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ.