ಸಚಿವ ಕೆ.ಎಸ್. ಈಶ್ವರಪ್ಪ ಹೆಸರು ದುರ್ಬಳಕೆ ಮಾಡಿಕೊಂಡು ಲಕ್ಷಾಂತರ ರೂ. ವಂಚನೆ: ಐವರ ವಿರುದ್ಧ ಪ್ರಕರಣ ದಾಖಲು !

0
649

ಶಿವಮೊಗ್ಗ:‌ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೆಸರು ದುರ್ಬಳಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಲಾಗಿದೆ. ಈ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮೈಸೂರಿನ ಸಿವಿಲ್ ಇಂಜಿನಿಯರ್ ರಾಜೇಶ್ ಎಂಬುವವರಿಗೆ 100 ಕೋಟಿ ರೂಪಾಯಿ ಲೋನ್ ಕೊಡಿಸುವುದಾಗಿ ನಂಬಿಸಲಾಗಿದೆ. ವಿಲ್ಲಾ ಪ್ರಾಜೆಕ್ಟ್‌ಗಾಗಿ ಈ ಲೋನ್ ಕೊಡಿಸುವುದಾಗಿ ತಿಳಿಸಲಾಗಿತ್ತು.‌ ಇದಕ್ಕಾಗಿ ಐವರು ಆರೋಪಿಗಳು 10 ಲಕ್ಷ ರೂ. ಪಡೆದುಕೊಂಡಿದ್ದಾರೆ ಎಂದು ರಾಜೇಶ್ ದೂರಿನಲ್ಲಿ ತಿಳಿಸಿದ್ದಾರೆ.

ಹಣ ವಾಪಸ್ ಕೇಳಿದಾಗ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ 2:

106 ವಾಟರ್ ಆರ್. ಒ. ಪ್ಲಾಂಟ್ ಕೊಡಿಸುವುದಾಗಿ ಶಿವಮೊಗ್ಗದ ಗುತ್ತಿಗೆದಾರ ಲಕ್ಷ್ಮಣ್ ಎಂಬುವವರಿಗೆ ವಂಚಿಸಲಾಗಿದೆ. ಲಕ್ಷ್ಮಣ್ ಅವರಿಂದ 26.25 ಲಕ್ಷ ರೂಪಾಯಿ ಹಣ ಪಡೆದುಕೊಂಡು ವಂಚನೆ ಮಾಡಲಾಗಿದೆ. ಆರ್.ಒ ಪ್ಲಾಂಟ್ ಕೊಡಿಸದೇ ಇರುವಾಗ ಹಣ ಕೇಳಿದಾಗ ಲಕ್ಷ್ಮಣ್‌ಗೆ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಐವರ ವಿರುದ್ಧ ಕೇಸ್:

ಎರಡು ಪ್ರಕರಣದಲ್ಲಿ ಐವರು ಆರೋಪಿಗಳು ತಾವು ಸಚಿವ ಈಶ್ವರಪ್ಪ ಆಪ್ತರು ಎಂದು ಬಿಂಬಿಸಿಕೊಂಡಿದ್ದಾರೆ. ಇದನ್ನು ನಂಬಿ ಮೈಸೂರಿನ ರಾಜೇಶ್ ಮತ್ತು ಶಿವಮೊಗ್ಗದ ಲಕ್ಷ್ಮಣ್ ಹಣ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಎರಡು ಪ್ರಕರಣದಲ್ಲಿ ವಿಠಲ ರಾವ್, ಮೊಹಮ್ಮದ್ ಮುಫಾಸಿರ್, ಮಂಜುನಾಥ, ಕಾಜಿ ವಲೀಸ್, ಮೊಹಮ್ಮದ್ ರೆಹಮಾನ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನು ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here