ಸರಣಿ ಅಪಘಾತ: ಓರ್ವ ಆಸ್ಪತ್ರೆಯಲ್ಲಿ ಸಾವು ! ಹಲವರಿಗೆ ಗಾಯ

0
2000

ಚಿಕ್ಕಮಗಳೂರು : ಇಂದು ಮಧ್ಯಾಹ್ನ ಮೂರು ಗಂಟೆಯ ವೇಳೆಗೆ ಚಿಕ್ಕಮಗಳೂರು ಮೂಡಿಗೆರೆ ರಸ್ತೆಯ ಕಬ್ಬಿಣ ಸೇತುವೆ ಕೇಳಗೂರು ಗ್ರಾಮಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಓರ್ವನಿಗೆ ತೀವ್ರ ಪ್ರಮಾಣದ ಗಾಯವಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಮೊದಲು ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು ಬಸ್ ಕಾರಿಗೆ ಗುದ್ದಿ ನಂತರ ಹಿಂದೆ ಬರುತ್ತಿದ್ದ ತರಕಾರಿ ವಾಹನಕ್ಕೆ ಗೂದ್ದಿದೆ ನಂತರ ಮತ್ತೆ ನಾಲ್ಕು ವಾಹನಗಳಿಗೆ ಡಿಕ್ಕಿಯಾಗಿದೆ. ಇದರಿಂದ ತರಕಾರಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು.

ಸಾರಿಗೆ ಬಸ್ ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ತೆರಳುವ ಸಮಯದಲ್ಲಿ ಈ ಘಟನೆ ನಡೆದಿದೆ. ಬಸ್ ಅತಿವೇಗದ ಚಾಲನೆಯೆ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಸುದ್ದಿ ತಿಳಿದ ತಕ್ಷಣ ಸ್ಥಳೀಯರು ಸಾಕಷ್ಟು ಸಂಖ್ಯೆಯಲ್ಲಿ ಜಮಾಯಿಸಿದ್ದು, ಕಾರಿನಲ್ಲಿದ್ದ ಗಾಯಾಳುಗಳನ್ನು ಹೊರತೆಗೆಯಲು ತೀವ್ರ ಶ್ರಮ ವಹಿಸಬೇಕಾಯಿತು.

ಮೃತ ವ್ಯಕ್ತಿಯನ್ನು ಮಲ್ಲಂದೂರು ಮೂಲದವನು ಎಂದು ಗುರುತಿಸಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here