ಸರ್ಕಾರಿ ಕಾಲೇಜಿನಲ್ಲಿ ಸೀಟುಗಳ ಸಂಖ್ಯೆ ಹೆಚ್ಚಿಸಿ ಮುಕ್ತ ದಾಖಲಾತಿಗೆ ಅವಕಾಶ ಕಲ್ಪಿಸಿ: ವಾಟಗೋಡು ಸುರೇಶ್ ಆಗ್ರಹ

0
480

ಹೊಸನಗರ: ಸರ್ಕಾರಿ ಪದವಿ ಹಾಗೂ ಪಿಯುಸಿ ಕಾಲೇಜುಗಳಲ್ಲಿ ಎಲ್ಲಾ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ್ ಆಗ್ರಹಿಸಿದ್ದಾರೆ.

ಈ ಬಾರಿ ಕೋವಿಡ್ ಕಾರಣದಿಂದಾಗಿ ಎಸ್ಎಲ್ಎಸ್ಸಿ ಹಾಗೂ ಪಿಯುಸಿಯಲ್ಲಿ ಶೇಕಡಾ 100 ಫಲಿತಾಂಶ ಬಂದಿದೆ. ಇದರಿಂದಾಗಿ ಕಾಲೇಜಿಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆದರೆ ಕೆಲವು ಸರ್ಕಾರಿ ಕಾಲೇಜುಗಳಲ್ಲಿ ಮೆರಿಟ್ ಆಧಾರದ ಮೇರೆಗೆ ಸೀಟು ಭರ್ತಿ ಮಾಡಲಾಗುವುದು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಪ್ರಿನ್ಸಿಪಾಲರು ಹೇಳಿಕೆ ನೀಡಿದ್ದಾರೆ.

ಇದರಿಂದಾಗಿ ಗ್ರಾಮೀಣ ಭಾಗದ ಕೋವಿಡ್ ಕಾರಣದಿಂದಾಗಿ ಆನ್‌ಲೈನ್ ಶಿಕ್ಷಣದಿಂದ ವಂಚಿತರಾದ ಬಡ ಹಾಗೂ ಮೆರಿಟ್ ಕಡಿಮೆ ಇರುವ ವಿದ್ಯಾರ್ಥಿಗಳ ಸಮುದಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ ಎಂದು ಆರೋಪಿಸಿದರು.

ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಬೇಕು. ವಿದ್ಯಾರ್ಥಿಗಳ ಅಪೇಕ್ಷೆಗೆ ತಕ್ಕಂತೆ ಎಲ್ಲಾ ವಿಭಾಗದಲ್ಲಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು.

ಖಾಸಗಿ ಪದವಿ ಹಾಗೂ ಪಿಯುಸಿ ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಇದನ್ನು ಸರ್ಕಾರವು ಕಡಿವಾಣ ಹಾಕಬೇಕು ಎಂದು ಅವರು ಆಗ್ರಹ ಮಾಡಿದರು.

ಈ ನಿಟ್ಟಿನಲ್ಲಿ ಪದವಿದರ ಕ್ಷೇತ್ರದಿಂದ ಆಯ್ಕೆಯಾದ ವಿಧಾನ ಪರಿಷತ್ತು ಸದಸ್ಯರಾದ ಆಯನೂರು ಮಂಜುನಾಥ ಅವರು ಸರ್ಕಾರಿ ಕಾಲೇಜು ಸೇರ್ಪಡೆಗೆ ಬಯಸಿರುವ ಎಲ್ಲಾ ವಿದ್ಯಾರ್ಥಿಗಳಿಗೆ ದಾಖಲಾತಿ ನೀಡುವಂತೆ ಸರ್ಕಾರಿ ಆದೇಶ ಮಾಡಿರುವಂತೆ ಅವರು ಮನವಿ ಮಾಡಿದರು.

ವರದಿ: ಹೆಚ್.ಎಸ್.ನಾಗರಾಜ್
ಜಾಹಿರಾತು

LEAVE A REPLY

Please enter your comment!
Please enter your name here