ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಒತ್ತುವರಿಯಾಗಿದ್ದಲ್ಲಿ ತಕ್ಷಣ ಸಾರ್ವಜನಿಕರು ತಾಲ್ಲೂಕು ಕಛೇರಿ ಗಮನಕ್ಕೆ ತನ್ನಿ ; ತಹಶೀಲ್ದಾರ್ ವಿ.ಎಸ್. ರಾಜೀವ್

0
605

ಹೊಸನಗರ: ಸರ್ಕಾರಿ ಜಮೀನು ಒತ್ತುವರಿ, ಕೆರೆ, ಕಟ್ಟೆ, ಕುಂಟೆ, ಹಳ್ಳ ಸರೋವರ ಹಾಗೂ ಇನ್ನಿತರ ಜಲಕಾಲ/ ಜಲಮೂಲಗೆಂದು ವರ್ಗಿಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ನಮೂದಾಗಿರುವ ರಸ್ತೆ, ಬೀದಿ, ಬಂಡಿ ದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲ ಸರ್ಕಾರಿ ಜಮೀನುಗಳನ್ನು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಸಂಬಂಧ ಪಟ್ಟ ಜಿಲ್ಲಾದಿಕಾರಿಗಳಿಗೆ ಅಥವಾ ತಾಲ್ಲೂಕು ಕಛೇರಿಯ ತಹಶೀಲ್ದಾರ್‌ರವರ ಗಮನಕ್ಕೆ ತಂದರೆ ತಕ್ಷಣ ಖುಲ್ಲ ಮಾಡಿಸಿಕೊಡಲಾಗುವುದು ಎಂದು ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಿಳಿಸಿದರು.

ಹೊಸನಗರದ ತಾಲ್ಲೂಕು ಕಛೇರಿಯ ಆವರಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿನ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದ್ದು ಸ್ಮಶಾನ ಕಲ್ಪಿಸಲು ಸರ್ಕಾರ ಅನೇಕ ಪ್ರಕಟಣೆಗಳನ್ನು ಹೊರಡಿಸಲಾಗಿದ್ದು ಸರ್ಕಾರದ ಜಮೀನು ಲಭ್ಯವಿರುವ ಕಡೆ ಸ್ಮಶಾನ ಉದ್ದೇಶಕ್ಕಾಗಿ 2.00 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71 ರಡಿ ಪ್ರದತ್ತವಾದ ಅಧಿಕಾರದನ್ವಯ ಜಿಲ್ಲಾದಿಕಾರಿಗಳು ರಾಜ್ಯದಲ್ಲಿ ಸರ್ಕಾರಿ ಜಮೀನು ಕಾಯ್ದಿರಿಸಲು ಶಿವಮೊಗ್ಗ ಜಿಲ್ಲಾಧಿಕಾರಿಗಳು ತಾಲ್ಲೂಕು ಕೇಂದ್ರಕ್ಕೆ ತಿಳಿಸಿದ್ದು ಅದರಂತೆ ಸರ್ಕಾರಿ ಜಮೀನು “ಬ” ಖರಾಬು ಎಂದು ವರ್ಗಿಕೃತವಾಗಿದ್ದಲ್ಲಿ ಸ್ಮಶಾನದ ಉದ್ದೇಶವು ಸಾರ್ವಜನಿಕ ಉದ್ದೇಶವಾಗಿರುವುದರಿಂದ ಅಂತಹ ಜಮೀನುಗಳನ್ನು ಸಹ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 71 ರನ್ವಯ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು ಸರ್ಕಾರಿ ಜಮೀನು ಹಾಗೂ ಗೋಮಾಳ ಜಮೀನು ಇತ್ತುವರಿಯಾಗಿದ್ದಲ್ಲಿ ಒತ್ತುವರಿಯಿಂದ ತೆರವು ಗೋಳಿಸುವ ಅಧಿಕಾರಿ ತಾಲ್ಲೂಕು ಕಛೇರಿಗೆ ಇರುತ್ತದೆ ಸರ್ಕಾರಿ ಜಮೀನುಗಳನ್ನು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71ರ ಅನ್ವಯ ಜಿಲ್ಲಾಧಿಕಾರಿಗಳ ಸ್ಮಶಾನದ ಉದ್ದೇಶಕ್ಕಾಗಿ ಕಾಯ್ದಿರಿಸಲು ಅವಕಾಶ ಕಲಿಸಲಾಗಿದ್ದು ಸರ್ಕಾರಿ ಜಮೀನಿನಲ್ಲಿ ಅನಧೀಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಅಂತಹ ಅನರ್ಹ ಅರ್ಜಿಗಳನ್ನು ವಜಾ ಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಸ್ಮಶಾನಕ್ಕಾಗಿ ಕಾಯ್ದಿರಿಸುವ ಅಧಿಕಾರ ಕಂದಾಯ ಇಲಾಖೆ ನಮಗೆ ನೀಡಿದ್ದು ಸ್ಮಶಾನ ಜಾಗ ಒತ್ತುವರಿಯಾಗಿದ್ದಲ್ಲಿ ತಕ್ಷಣ ತಾಲ್ಲೂಕು ಕಛೇರಿಗೆ ತಿಳಿಸಬೇಕೆಂದು ಈ ಸಂದರ್ಭದಲ್ಲಿ ಕೇಳಿಕೊಂಡರು.

ಈ ಸಂದರ್ಭದಲ್ಲಿ ಗ್ರೇಡ್2 ತಹಶೀಲ್ದಾರ್ ರಾಕೇಶ್, ಶಿರಾಸ್ಥೆದಾರ್ ಸುಧೀಂದ್ರಕುಮಾರ್, ಶ್ರೀಕಾಂತ್ ಹೆಗಡೆ, ಪ್ರಥಮ ದರ್ಜೆ ಗುಮಾಸ್ಥರಾದ ವಿನಯ್ ಎಂ ಆರಾಧ್ಯ, ಚಿರಾಗ್ ಮಂಜುಳ, ಚಾಂದಿನಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here