ಸರ್ಕಾರಿ ಬಸ್ ನಿಲ್ದಾಣದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ಓರ್ವನಿಗೆ ಗಂಭೀರ ಗಾಯ !

0
3313

ಮೂಡಿಗೆರೆ: ಪಟ್ಟಣದಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಒಳಗಡೆಯೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ.

ಶನಿವಾರದಂದು ಈ ಘಟನೆ ನಡೆದಿದು, ಓರ್ವ ಯುವಕನಿಗೆ ತಲೆಗೆ ಗಂಭೀರ ಗಾಯವಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರುಗೆ ರವಾನಿಸಲಾಗಿದೆ ಎಂಬ ಮಾಹಿತಿ ದೊರೆತಿದೆ.

ಮೂಡಿಗೆರೆಯ ಪೊಲೀಸರು ಜಗಳಕ್ಕೆ ಸಂಭವಿಸಿದಂತೆ ಕಾರ್ಯಚರಣೆ ನಡೆಸಿ ಈಗಾಗಲೇ ಓರ್ವನನ್ನು ಬಂಧಿಸಿದ್ದು ಇನ್ನೂ ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಈ ಕಾರಣದಿಂದ ಬಸ್ ನಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಪ್ರಯಾಣಿಕರಿಗೆ ಇಲ್ಲಿ ಏನಾಗುತ್ತದೆ ಎಂಬುದು ತಿಳಿಯದೆ ಗೊಂದಲ ಮೂಡಿತ್ತು.

ಇಷ್ಟೆಲ್ಲಾ ಘಟನೆ ನಡೆಯುತ್ತಿದ್ದರೂ ಬಸ್ ನಿಲ್ದಾಣದಲ್ಲಿ ಇದ್ದ ಸಿಸಿ ಕ್ಯಾಮೆರಾಗಳು ಹಾಳಾಗಿದ್ದರು ದುರಸ್ತಿ ಮಾಡದಿರುವುದು ವಿಪರ್ಯಾಸ.

ಬಸ್ ನಿಲ್ದಾಣದಲ್ಲಿ ಪುಂಡ ಪೋಕರಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರು ಪೊಲೀಸ್ ಇಲಾಖೆ ಹಾಗೂ ಸಾರಿಗೆ ಸಂಸ್ಥೆಯ ಅಧಿಕಾರಗು ತಮಗೆ ಸಂಬಂಧ ಇಲ್ಲದೆ ಇರೊತ್ತರ ಸುಮ್ಮನಾಗಿದ್ದಾರೆ.

ನಿಲ್ದಾಣದಲ್ಲಿ ವಿದ್ಯಾರ್ಥಿನಿಯರ ಮತ್ತು ಮಹಿಳೆಯರ ಭದ್ರತೆ ಮರೀಚಿಕೆಯಾಗಿದ್ದು ಈಗಲಾದರು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಾರ್ವಜನಿಕ ಆಗ್ರಹಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here