ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ !

0
1047

ಶಿವಮೊಗ್ಗ: ಉಂಬಳೇಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟದಕೆರೆ ಕ್ರಾಸ್ ಬಳಿ ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರ ಚಾಲಕರು ಸೇರಿ 40 ಪ್ರಯಾಣಿಕರು ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಸರ್ಕಾರಿ ಬಸ್ ಮತ್ತು ಖಾಸಗಿ ಕೆಕೆಬಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಸರ್ಕಾರಿ ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿತ್ತು. ಖಾಸಗಿ ಬಸ್ ಶಿವಮೊಗ್ಗದಿಂದ ಕೊಪ್ಪಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.

ಸರ್ಕಾರಿ ಚಾಲಕ ಮಲ್ಲೇಶ್ (34), ಖಾಸಗಿ ಬಸ್ ಚಾಲಕ ಶ್ರೀಧರ್ ಭಟ್ ಇಬ್ಬರಿಗೂ ಗಂಭೀರ ಗಾಯವಾಗಿದೆ. ಎರಡೂ ಬಸ್ಸಿನಲ್ಲಿದ್ದ ಸುಮಾರು 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಎರಡು ಬಸ್ಸುಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಾಳುಗನ್ನು ಮೆಗ್ಗಾನ್ ಹಾಗೂ ಅಶೋಕ ಸಂಜೀವಿನಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಈ ಘಟನೆ ಸಂಭವಿಸಿದೆ.

 

ಜಾಹಿರಾತು

LEAVE A REPLY

Please enter your comment!
Please enter your name here